ADVERTISEMENT
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ ಮೂರನೇ ಪಟ್ಟಿಯನ್ನು ಪ್ರಕಟಿಸಿದೆ. ಮೂರನೇ ಪಟ್ಟಿಯಲ್ಲಿ ತಮಿಳುನಾಡಿನ 9 ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಇದೇ ಮೊದಲ ಬಾರಿಗೆ ಅಣ್ಣಾಮಲೈ ಲೋಕಸಭಾ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ.
ಮೂರನೇ ಪಟ್ಟಿಯಲ್ಲಿ ಕರ್ನಾಟಕದ ಉಳಿದ 8 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿಲ್ಲ.
ತಮಿಳುನಾಡು ಒಟ್ಟು 39 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಈ ಬಾರಿ 20 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ. 10 ಲೋಕಸಭಾ ಕ್ಷೇತ್ರವನ್ನು ಪಿಎಂಕೆಗೆ ಬಿಟ್ಟು ಕೊಟ್ಟಿದೆ. 2 ಕ್ಷೇತ್ರವನ್ನು ಟಿಟಿವಿ ದಿನಕರನ್ ಅವರ ಪಕ್ಷಕ್ಕೆ ಬಿಟ್ಟು ಕೊಡಲಾಗಿದೆ. ತಮಿಳ್ ಮನಿಲ ಕಾಂಗ್ರೆಸ್ 3 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ.
ತೆಲಂಗಾಣದ ಮಾಜಿ ರಾಜ್ಯಪಾಲೆಯೂ ಆಗಿರುವ ತಮಿಳುನಾಡು ಬಿಜೆಪಿ ಘಟಕದ ಮಾಜಿ ಅಧ್ಯಕ್ಷೆ ತಮಿಳ್ಸೈ ಸೌಂದರರಾಜನ್ ಅವರು ಚೆನ್ನೈ ದಕ್ಷಿಣ ಕ್ಷೇತ್ರದಿಂದ, ಅಣ್ಣಾಮಲೈ ಕೊಯಮುತ್ತೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ಕೇಂದ್ರ ಸಚಿವ ಡಾ ಎಲ್ ಮುರುಗನ್ ಅವರು ನೀಲಗಿರಿ ಲೋಕಸಭಾ ಕ್ಷೇತ್ರದಿಂದ, ಪೊನ್ ರಾಧಾಕೃಷ್ಣ ಕನ್ಯಾಕುಮಾರಿಯಿಂದ, ಡಾ ಎ ಸಿ ಷಣ್ಮುಗನ್ ಅವರು ವೆಲ್ಲೂರಿನಿಂದ ಟಿಕೆಟ್ ನೀಡಲಾಗಿದೆ.
ADVERTISEMENT