ಸಿಎಂ ಸಿದ್ದರಾಮಯ್ಯ ಮತ್ತು ಅವರ ಮಗ ಮಾಜಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ನಡುವಿನ ದೂರವಾಣಿ ಸಂಭಾಷಣೆಯ ದೃಶ್ಯದ ಬೆನ್ನಲ್ಲೇ ಕರ್ನಾಟಕ ಬಿಜೆಪಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹೊಸ ಪೋಸ್ಟರ್ನ್ನು ಬಿಡುಗಡೆಗೊಳಿಸಿದೆ.
ಕಲೆಕ್ಷನ್ ಕೊಡಿ, ನಿಗಮ ಮಂಡಳಿ ಅಧಿಕಾರ ಪಡಿ ಎಂಬ ಶೀರ್ಷಿಕೆಯಲ್ಲಿ ಎಟಿಎಂ ಸರ್ಕಾರದ ಹರಾಜು ಎಂಬ ಹೆಸರಲ್ಲಿ ಪೋಸ್ಟರ್ ಬಿಡುಗಡೆ ಮಾಡಿದೆ.
ನಿಗಮ ಮಂಡಳಿಗೆ ಕೆಲವೇ ದಿನಗಳಲ್ಲಿ ಅಧಿಕೃತ ಆದೇಶ ಹೊರಬೀಳಲಿರುವ ಹಿನ್ನೆಲೆಯಲ್ಲಿ ಹಣ ಪಡೆದು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದೆ.
ಈಗಾಗಲೇ ವರ್ಗಾವಣೆಯನ್ನು ಫೋನ್ ಕರೆಯಲ್ಲೇ ನಿಭಾಯಿಸುವ ವ್ಯವಸ್ಥಿತ ದಂಧೆಯನ್ನಾಗಿ ಮಾಡಿಕೊಂಡಿರುವ @siddaramaiah ಅವರ ಸರ್ಕಾರ ನಿಗಮ ಮಂಡಳಿ ಹರಾಜಿಗೆ ಇಷ್ಟು ದಿನ ಕಾಯತ್ತಿತ್ತು. ಈ ಹಿಂದೆ ವ್ಯವಹಾರ ಸರಿಯಾಗಿ ಕುದುರದ ಕಾರಣ ಮುಂದೂಡಲಾಗಿದ್ದ ನಿಗಮ ಮಂಡಳಿ ಹುದ್ದೆಗಳ ಹರಾಜು ಪ್ರಕ್ರಿಯೆ ಬಗ್ಗೆ @rssurjewala ಅವರು ದೆಹಲಿಯಿಂದ ಬಂದು ಸಮಾಲೋಚನೆಗಳನ್ನು ನಡೆಸಿದ್ದಾರೆ. ಪರಿಣಾಮವಾಗಿ ನಿಗಮ ಮಂಡಳಿ ಹುದ್ದೆಗೆ ಕೊಡಬೇಕಾದ ಕಲೆಕ್ಷನ್ ಪ್ರಮಾಣ ಮತ್ತೆ ಚರ್ಚೆಗೆ ಬಂದಿದೆ.