ಕರ್ನಾಟಕದಲ್ಲಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.
ಬೋರ್ಡ್ ಪರೀಕ್ಷೆಕ್ಕೆ ತಡೆ ನೀಡಿ ಹೈಕೋರ್ಟ್ನ ಏಕಸದಸ್ಯ ನ್ಯಾಯಪೀಠ ನೀಡಿದ್ದ ಆದೇಶವನ್ನು ನ್ಯಾಯಮೂರ್ತಿ ಕೆ ಸೋಮಶೇಖರ್ ಮತ್ತು ನ್ಯಾಯಮೂರ್ತಿ ರಾಜೇಶ್ ರೈ ಅವರಿದ್ದ ಪೀಠ ವಜಾಗೊಳಿಸಿದೆ.
ಏಕಸದಸ್ಯ ಪೀಠದ ಆದೇಶದ ವಿರುದ್ಧ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. 5,8,9ನೇ ತರಗತಿಗಳಿಗೆ ಬಾಕಿ ಇರುವ ಪರೀಕ್ಷೆಯನ್ನು ಪೂರ್ಣಗೊಳಿಸುವಂತೆ ಹೈಕೋರ್ಟ್ ಸೂಚಿಸಿದೆ.