BREAKING: ಗುಜರಾತ್​, ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ – ಇವತ್ತೇ ಘೋಷಣೆ

ಗುಜರಾತ್ ಮತ್ತು ಹಿಮಾಚಲ​ ವಿಧಾನಸಭಾ ಚುನಾವಣೆಗೆ ಇವತ್ತು ದಿನಾಂಕ ಘೋಷಣೆ ಆಗಲಿದೆ.
ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಉಳಿದಿಬ್ಬರು ಆಯುಕ್ತರ ಜೊತೆಗೆ ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಚುನಾವಣಾ ದಿನಾಂಕ ಪ್ರಕಟಿಸಲಿದ್ದಾರೆ.
ಗುಜರಾತ್​ ರಾಜ್ಯದ ಒಟ್ಟು 182 ವಿಧಾನಸಭಾ ಕ್ಷೇತ್ರಗಳ ಪೈಕಿ 2018ರಲ್ಲಿ ಬಿಜೆಪಿ 99 ಮತ್ತು ಕಾಂಗ್ರೆಸ್​ 77 ಸ್ಥಾನಗಳಲ್ಲಿ ಗೆದ್ದಿತ್ತು. ಇತರರು 6 ಕ್ಷೇತ್ರಗಳಲ್ಲಿ ಗೆದ್ದಿದ್ದರು.
ಹಿಮಾಚಲ ಪ್ರದೇಶ ರಾಜ್ಯದ ಒಟ್ಟು 68 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 44, ಕಾಂಗ್ರೆಸ್​ 21, ಇತರರು ಮೂರು ಸ್ಥಾನಗಳಲ್ಲಿ ಗೆದ್ದಿದ್ದರು.