ದಕ್ಷಿಣ ಕನ್ನಡದ ಜಿಲ್ಲೆಯಲ್ಲಿ ಬೈಕ್ ಹಿಂಬದಿ ಸವಾರರಿಗೆ ನಿರ್ಬಂಧ ವಿಧಿಸಿ ಕಾನೂನು ಮತ್ತು ಸುವ್ಯವಸ್ಥೆ ಇಲಾಖೆಯ ಎಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಈ ನಿರ್ಬಂಧ ಒಂದು ವಾರಗಳ ಕಾಲ ಇರಲಿದೆ. ಆದರೆ, ಈ ನಿರ್ಬಂಧದಿಂದ ಮಹಿಳೆಯರು, ಹಿರಿಯ ನಾಗರೀಕರು ಹಾಗೂ ಮಕ್ಕಳಿಗೆ ವಿನಾಯಿತಿ ನೀಡಲಾಗಿದೆ.
ಕೆಲ ದಿನಗಳಿಂದ ಪ್ರಕ್ಷಬ್ದಗೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ತಡೆಯಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.