ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಇನ್ಮುಂದೆ ಪ್ರತಿ ತಿಂಗಳ ಒಂದನೇ ತಾರೀಕಿಗೆ ತನ್ನ ಸಿಬ್ಬಂದಿಗೆ ವೇತನ (Salary) ನೀಡಲಿದೆ.
ಈ ಬಗ್ಗೆ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ ಅನ್ಬುಕುಮಾರ್ ಆದೇಶ ಹೊರಡಿಸಿದ್ದಾರೆ.
ಸಾರಿಗೆ ಸಂಸ್ಥೆಯ ಆತ್ಮವೇ – ನಮ್ಮ ಕಾರ್ಮಿಕ ಬಂಧುಗಳು. ಅವರ ಕ್ಷೇಮಾಭಿವೃದ್ಧಿ, ಹಿತಾಸಕ್ತಿಯನ್ನು ಕಾಪಾಡುವುದು ಹಾಗೂ ಅವರ ಕಷ್ಟಗಳಿಗೆ ಸಕಾಲದಲ್ಲಿ ಸ್ಪಂದಿಸುವುದು ನಮ್ಮ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಅಕ್ಟೋಬರ್ -2022ರ ಮಾಹೆಯಿಂದ ಪ್ರಥಮ ಬಾರಿಗೆ ಚಾಲಕ, ನಿರ್ವಾಹಕ ಮತ್ತು ತಾಂತ್ರಿಕ ಸಿಬ್ಬಂದಿಗಳನ್ನು ಸೇರಿದಂತೆ ಸಮಸ್ತ ಸಿಬ್ಬಂದಿಗಳಿಗೆ ಪ್ರತಿ ಮಾಹೆಯ ದಿನಾಂಕ 1ರಂದೇ ವೇತನವನ್ನು ಪಾವತಿ ಮಾಡಲು ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಸಿಬ್ಬಂದಿಗಳ ವೇತನ ಬಿಲ್ಲುಗಳನ್ನು ತಯಾರಿಸುವಾಗ ಹಾಜರಾತಿ, ರಜೆ ಮಂಜೂರಾತಿ ಆದೇಶ, ಹೆಚ್ಚುವರಿ ಭತ್ಯೆ ದಾಖಲಾತಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ ವೇತನದ ಬಿಲ್ಲನ್ನು ಸಿದ್ಧಪಡಿಸುವ ಅಗತ್ಯವಿರುತ್ತದೆ.
ಈ ಹಿನ್ನೆಲೆಯಲ್ಲಿ ಕಾರ್ಮಿಕ ಸಿಬ್ಬಂದಿ ವೇತನ ಪಾವತಿಗಾಗಿ ತಿಂಗಳಿನ ದಿನಾಂಕ 20ರಿಂದ 30ರವರೆಗೆ ಊಹಾತ್ಮಕ ಹಾಜರಾತಿ ಪರಿಗಣಿಸುವ ಕಾರಣ ಸಿಬ್ಬಂದಿ ಸದರಿ ಅವಧಿಯಲ್ಲಿ ಅನಧಿಕೃತ ಗೈರು ಹಾಜರಿ ಮತ್ತು ರಜೆಯನ್ನು ಪಡೆಯದೇ ಪೂರ್ಣ ಸಂಬಳ ಪಡೆಯಲು ಸಕರಾತ್ಮಕವಾಗಿ ಸ್ಪಂದಿಸುವಂತೆ
ಕೆಎಸ್ಆರ್ಟಿಸಿ ತನ್ನ ಆದೇಶದಲ್ಲಿ ತಿಳಿಸಿದೆ.
ADVERTISEMENT
ADVERTISEMENT