ಕೊರೋನಾ ಸಾಂಕ್ರಾಮಿಕದ ನಿಯಮ ಉಲ್ಲಂಘಿಸಿ ಪಾದಯಾತ್ರೆ ಮಾಡಿದ ಆರೋಪದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋರ್ಟ್ಗೆ ಹಾಜರಾಗಬೇಕು ಎಂದು ರಾಮನಗರ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಮೇ 24 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಮನಗರ ಸೆಷನ್ಸ್ ಕೋರ್ಟ್ ಸಮನ್ಸ್ನಲ್ಲಿ ತಿಳಿಸಿದೆ.
ಸಮನ್ಸ್ ಪಡೆದ ಸಿದ್ದರಾಮಯ್ಯನವರು ನಾಳೆ ಕೋರ್ಟ್ಗೆ ಹಾಜರಾಗಲಿದ್ದಾರೆ ಎಂದು ತಿಳಿದುಬಂದಿದೆ.
ಇದೇ ವರ್ಷದ ಜನವರಿ 8 ರಂದು ಮೇಕೆದಾಟು ಯೋಜನೆಗೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಮೇಕೆದಾಟುವಿನಿಂದ ಬೆಂಗಳೂರಿನವರೆಗೆ ಕಾಂಗ್ರೆಸ್ ಬೃಹತ್ ಮಟ್ಟದ ಪಾದಯಾತ್ರೆಯನ್ನು ಹಮ್ಮಿಕೊಂಡಿತ್ತು. ಮೊದಲ ಹಂತ್ ಮೇಕೆದಾಟು ಪಾದಯಾತ್ರೆಯ ಸಂಧರ್ಭದಲ್ಲಿ ಕೊರೋನಾ ಉಲ್ಬಣ ಸಂಖ್ಯೆ ಹೆಚ್ಚಳವಾದ್ದರಿಂದ ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು.
ಫೆಬ್ರವರಿ 27 ರಿಂದ 2 ನೇ ಹಂತ್ ಮೇಕೆದಾಟು ಪಾದಯಾತ್ರೆಯನ್ನು ಆಯೋಜಿಸಿ ಮೇಕೆದಾಟು ಪಾದಯಾತ್ರೆಯನ್ನು ಕಾಂಗ್ರೆಸ್ ಯಶಸ್ವಿಯಾಗಿ ಮುಕ್ತಾಯಮಾಡಿತ್ತು.