ಫೇಸ್ ಬುಕ್ ನಲ್ಲಿ ಕೇಂದ್ರ ಸಚಿವೆ ಅಶ್ಲೀಲ ಫೋಟೊ ಪೋಸ್ಟ್ ಮಾಡಿದ ಪ್ರೊಫೆಸರ್

ಉತ್ತರಪ್ರದೇಶ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಕುರಿತು ಫೇಸ್ ಬುಕ್ ನಲ್ಲಿ ಅಶ್ಲೀಲ ಚಿತ್ರ ಪೋಸ್ಟ್ ಮಾಡಿರುವ ಆರೋಪ ಎದುರಿಸುತ್ತಿದ್ದ ಪ್ರೊಫೆಸರ್ ಉತ್ತರಪ್ರದೇಶದ ಫಿರೋಜಾಬಾದ್ ಕೋರ್ಟ್ ಗೆ ಶರಣಾದ ನಂತರ ಜೈಲಿಗೆ ಕಳುಹಿಸಿರುವ ಘಟನೆ ವರದಿಯಾಗಿದೆ.

ಫಿರೋಜಾಬಾದ್ ಕೋರ್ಟ್ ನ ಹೆಚ್ಚುವರಿ ಸೆಷನ್ಸ್ ಜಡ್ಜ್ ಅನುರಾಗ್ ಕುಮಾರ್ ಮುಂದೆ ಪ್ರೊಫೆಸರ್ ಶಾಹಾರ್ಯಾರ್ ಅಲಿ ಶರಣಾಗಿದ್ದು, ಏತನ್ಮಧ್ಯೆ ಅಲಿ ಮಧ್ಯಂತರ ಜಾಮೀನು ನೀಡುವಂತೆ ಮಂಗಳವಾರ ಜಾಮೀನು ಅರ್ಜಿ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.

ಆದರೆ ನ್ಯಾಯಾಧೀಶರು ಜಾಮೀನು ಅರ್ಜಿಯನ್ನು ರದ್ದುಗೊಳಿಸಿ, ಅಲಿಗೆ ಜೈಲುಶಿಕ್ಷೆ ವಿಧಿಸಿ ಆದೇಶ ನೀಡಿರುವುದಾಗಿ ಪಿಟಿಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.

ಕಳೆದ ಮಾರ್ಚ್ ತಿಂಗಳಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ವಿರುದ್ಧ ಎಸ್ ಆರ್ ಕೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಅಲಿ ತನ್ನ ಫೇಸ್ ಬುಕ್ ಪುಟದಲ್ಲಿ ಅಶ್ಲೀಲ ಫೋಟೋವನ್ನು ಪೋಸ್ಟ್ ಮಾಡಿರುವ ಆರೋಪದಡಿ ಫಿರೋಜಾಬಾದ್ ಪೊಲೀಸರು ಎಫ್ ಐಆರ್ ದಾಖಲಿಸಿದ್ದರು.

ಈ ಘಟನೆ ನಂತರ ಎಸ್ ಆರ್ ಕೆ ಕಾಲೇಜು ಮಂಡಳಿ ಅಲಿಯನ್ನು ಅಮಾನತುಗೊಳಿಸಿ ನೋಟಿಸ್ ಜಾರಿಗೊಳಿಸಿರುವುದಾಗಿ ವರದಿ ವಿವರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದಕ್ಕೂ ಮುನ್ನ ಅಲಿಗೆ ಬಂಧನದಿಂದ ರಕ್ಷಣೆ ನೀಡಲು ಸುಪ್ರೀಂಕೋರ್ಟ್ ಕೂಡಾ ನಿರಾಕರಿಸಿತ್ತು.

LEAVE A REPLY

Please enter your comment!
Please enter your name here