ಪಿಎಸ್ಐ ಮರು ಪರೀಕ್ಷೆಯನ್ನು ಜನವರಿ 23ಕ್ಕೆ ರಾಜ್ಯ ಸರ್ಕಾರ ಮುಂದೂಡಿದೆ. ಈ ಬಗ್ಗೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಘೋಷಿಸಿದ್ದಾರೆ.
ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಶ್ನೋತ್ತರ ಕಲಾಪ ವೇಳೆ ಪಿಎಸ್ಐ ಮರು ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯಿಸಿದರು.ಆದರೆ ಒಂದೂವರೆ ಸಾವಿರ ಸಬ್ ಇನ್ಸ್ಪೆಕ್ಟರ್ಗಳ ಹುದ್ದೆ ಖಾಲಿ ಇದೆ. ಸಬ್ ಇನ್ಸ್ಪೆಕ್ಟರ್ಗಳು ಇಲ್ಲದೇ ಲಾ ಅಂಡ್ ಆರ್ಡರ್ ನಿಭಾಯಿಸುವುದು ಹೇಗೆ..? ಜೊತೆಗೆ ಪೊಲೀಸ್ ಇಲಾಖೆಗೆ ಸಂಬಂಧಿಸಿದ ಉಳಿದ ಪರೀಕ್ಷೆಗಳೂ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಮುಂದೂಡಿಕೆ ಅಸಾಧ್ಯ ಎಂದು ಗೃಹ ಸಚಿವರು ಉತ್ತರಿಸಿದರು.
ಆದರೆ ಆಡಳಿತ ಪಕ್ಷ ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರು ಒತ್ತಾಯಿಸಿದ ಹಿನ್ನೆಲೆಯಲ್ಲಿ ಮಣಿದು ಗೃಹ ಸಚಿವ ಪರಮೇಶ್ವರ್ ಅವರು ಪರೀಕ್ಷೆ ಮುಂದೂಡಿಕೆ ಬಗ್ಗೆ ಘೋಷಿಸಿದರು.
ADVERTISEMENT
ADVERTISEMENT