ADVERTISEMENT
ದೆಹಲಿ ದಂಗೆ ಪ್ರಕರಣದಲ್ಲಿ ಆರೋಪಿಯಾಗಿರುವ ಉಮರ್ ಖಾಲಿದ್ಗೆ ದೆಹಲಿ ಕೋರ್ಟ್ 1 ವಾರಗಳ ಮಧ್ಯಂತರ ಜಾಮೀನು ನೀಡಿದೆ.
2020ರಲ್ಲಿ ದೆಹಲಿಯಲ್ಲಿ ನಡೆದ ದಂಗೆಗಳಲ್ಲಿ ಕೈವಾಡವಿದೆ ಎಂಬ ಆರೋಪದಡಿಯಲ್ಲಿ ಖಾಲಿದ್ ವಿರುದ್ಧ ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು.
ಖಾಲಿದ್ ಕುಟುಂಬದಲ್ಲಿ ನಡೆಯಲಿರುವ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಲುವಾಗಿ ಜಾಮೀನು ನೀಡಲಾಗಿದೆ.
7 ದಿನಗಳ ಜಾಮೀನು ಅವಧಿಯಲ್ಲಿ ಖಾಲಿದ್ ಪ್ರಕರಣಕ್ಕೆ ಸಂಬಂಧಿಸಿದ ಯಾವ ಸಾಕ್ಷಿಗಳನ್ನಾಗಲೀ ಅಥವಾ ಪ್ರಕರಣಕ್ಕೆ ಸಂಬಂಧಿಸಿದ ಯಾರನ್ನೇ ಆಗಲೀ ಭೇಟಿ ಮಾಡುವಂತಿಲ್ಲ. ಅಲ್ಲದೇ ಸಾಮಾಜಿಕ ಜಾಲತಾಣವನ್ನು ಬಳಸುವಂತಿಲ್ಲ. ಕೇವಲ ತಮ್ಮ ಕುಟುಂಬ ಸದಸ್ಯರು, ಸಂಬಂಧಿಕರು ಮತ್ತು ಸ್ನೇಹಿತರ ಭೇಟಿಗಷ್ಟೇ ಅವಕಾಶ ನೀಡಲಾಗಿದೆ. ಮದುವೆ ಕಾರ್ಯಕ್ರಮ ನಡೆಯುವ ಮನೆಯಲ್ಲೇ ಖಾಲಿದ್ ಉಳಿದುಕೊಳ್ಳಬೇಕು ಎಂಬ ಷರತ್ತುಗಳನ್ನು ವಿಧಿಸಲಾಗಿದೆ.
ಮದುವೆ ಕಾರ್ಯಕ್ರಮ ಮುಗಿದ ಬಳಿಕ ಜನವರಿ 3, 2025ರಂದು ಜೈಲು ಅಧೀಕ್ಷಕರ ಮುಂದೆ ಖಾಲಿದ್ ಶರಣಾಗಬೇಕಾಗುತ್ತದೆ.
2022ರಲ್ಲಿ ದೆಹಲಿ ಹೈಕೋರ್ಟ್ ಖಾಲಿದ್ಗೆ ಜಾಮೀನು ನಿರಾಕರಿಸಿತ್ತು. ಬಳಿಕ ಸುಪ್ರೀಂಕೋರ್ಟ್ಗೆ ವಿಶೇಷ ಮೇಲ್ಮನವಿ ಸಲ್ಲಿಸಿದ್ದ ಖಾಲಿದ್ ಆ ಬಳಿಕ ಆ ಅರ್ಜಿಯನ್ನು ವಾಪಸ್ ಪಡೆದಿದ್ದರು. ಕೆಳಹಂತದ ನ್ಯಾಯಾಲಯ ಇದೇ ವರ್ಷ ಖಾಲಿದ್ ಸಲ್ಲಿಸಿದ್ದ ಎರಡನೇ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.
ಕೆಳಹಂತದ ನ್ಯಾಯಾಲಯದ ಈ ಆದೇಶದ ವಿರುದ್ಧ ಖಾಲಿದ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ದೆಹಲಿ ಹೈಕೋರ್ಟ್ನಲ್ಲಿ ಇನ್ನೂ ಬಾಕಿಯಿದೆ.
ADVERTISEMENT