ನಿಂತಿದ್ದ ಟ್ರಕ್​ಗೆ ಬಸ್ ಡಿಕ್ಕಿ : 7 ಜನ ಸಾವು, ಹಲವರಿಗೆ ಗಾಯ

Accident

ಛತ್ತೀಸಗಡದ ಕೊರಬಾ ಜಿಲ್ಲೆಯಲ್ಲಿ ನಿಂತಿದ್ದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಖಾಸಗಿ ಟ್ರಾವೆಲ್ ಕಂಪನಿಗೆ ಸೇರಿದ ಬಸ್ ಛತ್ತೀಸಗಡ ರಾಜಧಾನಿ ರಾಯ್‌ಪುರದಿಂದ ಸರ್‌ಗುಜ ಜಿಲ್ಲೆಗೆ ಸಂಚರಿಸುತ್ತಿತ್ತು. ಬಂಗೋ ಪೊಲೀಸ್ ಠಾಣೆ ವ್ಯಾಪ್ತಿಯ ಮಡಾಯಿ ಘಾಟಿ ಬಳಿ ಇಂದು ಮುಂಜಾನೆ ಸುಮಾರು 4 ಗಂಟೆಗೆ ಅವಘಡ ಸಂಭವಿಸಿದೆ ಎಂದು ಕೊರಬಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಸಿಂಗ್ ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿಯಂತೆ, ಮುಂಭಾಗದಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಯತ್ನಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಏಳು ಮಂದಿ ಬಸ್ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ : BIG BREAKING: ಅಪಘಾತದಲ್ಲಿ TATA Sons ಮಾಜಿ ಮುಖ್ಯಸ್ಥ, ಉದ್ಯಮಿ ಸೈರಸ್​ ಮಿಸ್ತ್ರಿ ಸಾವು

LEAVE A REPLY

Please enter your comment!
Please enter your name here