ADVERTISEMENT
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಹೀನಾಯವಾಗಿ ಸೋತಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲಿಗೆ ಎರಗಿದ್ದಾರೆ.
ಇವತ್ತು ಬೆಂಗಳೂರಿನಲ್ಲಿರುವ ಯಡಿಯೂರಪ್ಪ ಅವರ ಧವಳಗಿರಿ ನಿವಾಸದಲ್ಲಿ ಸಿ ಟಿ ರವಿ ಭೇಟಿಯಾಗಿದ್ದಾರೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಬಣದಲ್ಲಿ ಗುರುತಿಸಿಕೊಂಡಿರುವ ಸಿ ಟಿ ರವಿ ವಿಧಾನಸಭಾ ಚುನಾವಣೆ ವೇಳೆ ಯಡಿಯೂರಪ್ಪ ಮತ್ತು ಬಿ ವೈ ವಿಜಯೇಂದ್ರ ವಿರುದ್ಧ ಬಹಿರಂಗ ಟೀಕೆಗಳನ್ನು ಮಾಡಿದ್ದರು.
ನಮ್ಮ ಪಕ್ಷದ ಹಿರಿಯ ನಾಯಕರು, ರೈತ ನಾಯಕ, ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯರಾದ ಶ್ರೀ ಬಿ. ಎಸ್. ಯಡಿಯೂರಪ್ಪ ಜಿ ಅವರನ್ನು ಇಂದು ಅವರ ನಿವಾಸದಲ್ಲಿ ಭೇಟಿ ಮಾಡಿದೆನು. ಸದಾ ಪ್ರೀತಿ ವಿಶ್ವಾಸದಿಂದ ನೋಡಿಕೊಳ್ಳುವ
@BSYBJP ಇಂದು ಉಪಹಾರದ ಸಮಯಕ್ಕೆ ಅವರ ನಿವಾಸಕ್ಕೆ ಹೋದಾಗ ನನ್ನ ಬೆಳಗ್ಗಿನ ಉಪಹಾರ ಮುಗಿಸಿದ್ದರೂ ಧವಲಗಿರಿಯ ದೋಸೆಯ ರುಚಿ ಸವಿಯುವವರೆಗೆ ಬಿಡಲಿಲ್ಲ.
ವಿಧಾನಸಭಾ ಅಧಿವೇಶನದ ನಂತರ ಲೋಕಸಭಾ ಚುನಾವಣಾ ನಿಮಿತ್ತ ರಾಜ್ಯಾದಂತ್ಯ ಪ್ರವಾಸ ಮಾಡಿ ಕಾರ್ಯಕರ್ತರ ವಿಶ್ವಾಸ ಹೆಚ್ಚಿಸುವ ಕೆಲಸ ಮಾಡುತ್ತೇನೆ ಎಂಬ ಅವರ ಪಕ್ಷದ ಮೇಲಿನ ಪ್ರೀತಿ ಮತ್ತು ಸಂಘಟನೆ ಮಾಡಬೇಕೆಂಬ ಛಲ ನನಗೆ ಇನ್ನಷ್ಟು ಸಂಘಟನಾತ್ಮಕ ಪ್ರವಾಸ ಮಾಡಬೇಕೆಂದು ಪ್ರೇರಣೆ ನೀಡಿತು
ಎಂದು ಸಿ ಟಿ ರವಿ ಅವರು ಯಡಿಯೂರಪ್ಪ ಅವರ ಜೊತೆಗಿನ ಭೇಟಿ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ADVERTISEMENT