ನಟ ದುನಿಯಾ ವಿಜಯ್ ಹಾಗೂ ಸಾಧು ಕೋಕಿಲ ವಿರುದ್ಧ ಪ್ರಕರಣ ದಾಖಲು

ಕನ್ನಡ ಚಿತ್ರರಂಗದ ಸ್ಟಾರ್ ನಟ ದುನಿಯಾ ವಿಜಯ್ ಹಾಗೂ ಸಾಧು ಕೋಕಿಲ ಅವರ ಮೇಲೆ ರಾಜ್ಯ ಸರ್ಕಾರ ಪ್ರಕರಣ ದಾಖಲಿಸಿದೆ.

ಜನವರಿ 9 ರಂದು ರಾಜ್ಯ ಕಾಂಗ್ರೆಸ್ ಆಯೋಜಿಸಿದ್ದ ಮೇಕೆದಾಟು ಪಾದಯಾತ್ರೆ ಕಾರ್ಯಕ್ರಮದಲ್ಲಿ ಇವರಿಬ್ಬರು ಪಾಲ್ಗೊಂಡಿದ್ದರು.

ಸರ್ಕಾರದ ನಿಯಮ ಮೀರಿ ಮೇಕೆದಾಟು ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಆ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದುನಿಯಾ ವಿಜಯ್, ಸಾಧು ಕೋಕಿಲ ಸೇರಿ 35 ಪ್ರಮುಖ ನಾಯಕರ ವಿರುದ್ಧ ರಾಜ್ಯ ಸರ್ಕಾರ ಪ್ರಕರಣ ದಾಖಲಿಸಿದೆ.

ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್​ನ ಹಿರಿಯ ನಾಯಕರಾದ ಎಚ್.ಎಂ.ರೇವಣ್ಣ ಹಾಗೂ ಸಿಎಂ ಇಬ್ರಾಹಿಂ ಅವರಿಗೆ ಇಂದು ಕೊರೋನಾ ಸೋಂಕು ದೃಢವಾಗಿದೆ.

LEAVE A REPLY

Please enter your comment!
Please enter your name here