ಜಾತಿವಾರು ಸಮೀಕ್ಷಾ ವರದಿಯನ್ನು ನಮ್ಮ ಸರ್ಕಾರ ಸ್ವೀಕರಿಸಲಿದೆ ಮತ್ತು ವಸ್ತುಸ್ಥಿತಿ ಆಧರಿಸಿ ಜನರಿಗೆ ಶಿಕ್ಷಣ, ಉದ್ಯೋಗ ಮತ್ತು ಉದ್ಯಮ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಹಿಂದುಳಿದ ಸಮುದಾಯಗಳ ಸ್ವಾಮೀಜಿಗಳ ಜೊತೆಗೆ ಸಿಎಂ ಸಿದ್ದರಾಮಯ್ಯ ಅವರು ಸಮಾಲೋಚನೆ ನಡೆಸಿದರು.
ಐತಿಹಾಸಿಕ ಕಾರಣಗಳಿಂದಾಗಿ ಶತ ಶತಮಾನಗಳಿಂದ ಅವಕಾಶ ವಂಚಿತರಿಗೆ ಅವಕಾಶ ಒದಗಿಸುವ ಮೂಲಕ ಅಸಮಾನತೆಯನ್ನು ನಿವಾರಿಸಿ ಸಮಾನತೆಯನ್ನು ಕಲ್ಪಿಸಬೇಕಾಗಿದೆ.
ಈ ನಿಟ್ಟಿನಲ್ಲಿ ಹಿಂದೆ ನಮ್ಮ ಸರ್ಕಾರ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು 162 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿತ್ತು.
ಸಮೀಕ್ಷೆಯ ವರದಿಯನ್ನು ಸ್ವೀಕರಿಸಲು ಹಿಂದಿನ ಸರ್ಕಾರಗಳು ಹಿಂದೇಟು ಹಾಕಿದವು.
ಇದೀಗ ನಮ್ಮ ಸರ್ಕಾರ ಈ ವರದಿಯನ್ನು ಸ್ವೀಕರಿಸಲಿದೆ. ವಸ್ತು ಸ್ಥಿತಿಯನ್ನು ಆಧರಿಸಿ, ಜನರಿಗೆ ಶಿಕ್ಷಣ, ಉದ್ಯೋಗ, ಉದ್ಯಮ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ADVERTISEMENT
ADVERTISEMENT