ನನಗೆ ಪುರುಸೊತ್ತಿಲ್ಲ – ಅಧ್ಯಕ್ಷ ಸ್ಥಾನ ತಿರಸ್ಕರಿಸಿದ ಸೂಲಿಬೆಲೆ

chakravarthy sulibele
chakravarthy sulibele

ಸದ್ಯಕ್ಕೆ ನನಗೆ ಸಮಯ ಕೊಡುವಷ್ಟು ಪುರುಸೊತ್ತು ಇಲ್ಲ ಎಂದು ಹೇಳಿ ಗಳಗನಾಥ ಮತ್ತು ರಾಜ ಪುರೋಹಿತ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಮಾಡಿದ್ದ ನೇಮಕಾತಿಯನ್ನು ಚಕ್ರವರ್ತಿ ಸೂಲಿಬೆಲೆ ( Chakravarthy Sulibele ) ತಿರಸ್ಕರಿಸಿದ್ದಾರೆ.

ಗಳಗನಾಥರ ಕುರಿತಂತೆ ಅಪಾರ ಗೌರವ ಹೊಂದಿರುವ ನನಗೆ, ನನ್ನನ್ನು ಗಳಗನಾಥ ಮತ್ತು ರಾಜ ಪುರೋಹಿತ ಪ್ರತಿಷ್ಠಾನಕ್ಕೆ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದು ಅಚ್ಚರಿಯೂ ಮತ್ತು ಸಂತಸವೂ ಆಯ್ತು.

ಆದರೆ ಸದ್ಯದ ಪರಿಸ್ಥಿತಿಯಲ್ಲಿ ಇದಕ್ಕೆ ಸಮಯ ಕೊಡುವಷ್ಟು ಪುರಸೊತ್ತಿಲ್ಲದಿರುವುದರಿಂದ ಅತ್ಯಂತ ವಿನೀತನಾಗಿಯೇ ಈ ಗೌರವವನ್ನು ಮರಳಿಸಬೇಕಾಗಿ ಬಂದಿದೆ.

ಗಳಗನಾಥರ ಕುರಿತಂತೆ ನನ್ನಷ್ಟೇ ಅಥವಾ ಅದಕ್ಕಿಂತಲೂ ಹೆಚ್ಚು ಪ್ರೀತ್ಯಾದರಗಳನ್ನು ಹೊಂದಿರುವ ಕೆಲವು ವ್ಯಕ್ತಿಗಳು ನನ್ನ ದೃಷ್ಟಿಯಲ್ಲಿದ್ದಾರೆ. ಸಂಬಂಧಪಟ್ಟವರಿಗೆ ಅದನ್ನು ತಿಳಿಸುವೆ. ಸೂಕ್ತವೆನಿಸಿದರೆ ಅವರನ್ನು ಆಯ್ಕೆ ಮಾಡಬಹುದು.

ಗಳಗನಾಥರ ಕನ್ನಡ ಸೇವೆಗೆ ನಾವೆಷ್ಟು ಋಣಿಯಾದರೂ ಕಡಿಮೆಯೇ. ಅವರ ಕೆಲಸ ಮಾಡುವ ಈ ಅವಕಾಶ ಸ್ವೀಕರಿಸಲಾಗದಿರುವುದಕ್ಕೆ ಖಂಡಿತವಾಗಿಯೂ ಖೇದವಿದೆ. ನನ್ನನ್ನು ಸೂಕ್ತವೆಂದು ಆಯ್ಕೆ ಮಾಡಿದವರಿಗೆ ಧನ್ಯವಾದಗಳು

ಎಂದು ಚಕ್ರವರ್ತಿ ಸೂಲಿಬೆಲೆ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ನಾಯಕರ ವಿರುದ್ಧ ಸರಣಿ ಟ್ವೀಟ್​ಗಳನ್ನು ಮಾಡಿ ಆಕ್ರೋಶ ಹೊರಹಾಕಿದ್ದ ಸೂಲಿಬೆಲೆ ಅವರಿಗೆ ಬಿಜೆಪಿ ಸರ್ಕಾರ ಅಧ್ಯಕ್ಷ ಸ್ಥಾನ ಕೊಟ್ಟಿತ್ತು.

LEAVE A REPLY

Please enter your comment!
Please enter your name here