ನಿಯಮ ಉಲ್ಲಂಘಿಸಿ ನಸುಕಿನ ಜಾವದವರೆಗೂ ಪಾರ್ಟಿ ಮಾಡಿದ್ದರ ಸಂಬಂಧ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ 8 ಮಂದಿಗೆ ಬೆಂಗಳೂರು ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ನಟ ದರ್ಶನ್, ಕಾಟೇರಾ ಸಿನಿಮಾ ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಅಭಿಷೇಕ್ ಅಂಬರೀಶ್, ಡಾಲಿ ಧನಂಜಯ್, ಕಾಟೇರಾ ನಿರ್ದೇಶಕ ತರುಣ್ ಸುಧೀರ್, ಚಿಕ್ಕಣ್ಣ, ಸಂಗೀತ ನಿರ್ದೇಶಕ ವಿ ಹರಿಕೃಷ್ಣ, ನೀನಾಸಂ ಸತೀಶ್ಗೆ ನೋಟಿಸ್ ನೀಡಲಾಗಿದೆ.
ವಿಚಾರಣೆಗೆ ಹಾಜರಾಗದ ನಟ ದರ್ಶನ್:
ಜನವರಿ 8ರಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನಟ ದರ್ಶನ್ ಮತ್ತು ನಿರ್ದೇಶಕ ತರುಣ್ ಸುಧೀರ್ಗೆ ಸುಬ್ರಹ್ಮಣ್ಯ ನಗರ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ಕಾಟೇರಾ ಸಿನಿಮಾದ ಪ್ರಚಾರಕ್ಕಾಗಿ ಇಬ್ಬರೂ ಜನವರಿ 4ರಂದೇ ದುಬೈಗೆ ಪ್ರಯಾಣಿಸಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರೂ ವಿಚಾರಣೆಗೆ ಹಾಜರಾಗಿಲ್ಲ.
ಸಂಭ್ರಮದಲ್ಲಿ ನಿಯಮ ಉಲ್ಲಂಘನೆ:
ಜನವರಿ 3ರಂದು ಬೆಂಗಳೂರಿನ ರಾಜಾಜಿನಗರದಲ್ಲಿರುವ ಓರಾಯನ್ ಮಾಲ್ನಲ್ಲಿ ಕಾಟೇರಾ ಸಿನಿಮಾದ ವಿಶೇಷ ಪ್ರದರ್ಶನ ಆಯೋಜಿಸಲಾಗಿತ್ತು. ಆ ಬಳಿಕ ಓರಾಯನ್ ಮಾಲ್ ಎದುರಿರುವ ನಿರ್ಮಾಪಕ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ ಜಗದೀಶ್ ಮಾಲೀಕತ್ವದ ಜೆಟ್ಲ್ಯಾಗ್ ಪಬ್ನಲ್ಲಿ ಜನವರಿ 4ರ ನಸುಕಿನ ಜಾವ 3.30ರವರೆಗೂ ಪಾರ್ಟಿ ಮಾಡಿದ್ದರು. ರಾತ್ರಿ 1 ಗಂಟೆಯವರೆಗೆ ಮಾತ್ರ ಪಾರ್ಟಿಗೆ ಅನುಮತಿ ಇತ್ತು.
ADVERTISEMENT
ADVERTISEMENT