ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ರಾಜ್ಯ ಸರ್ಕಾರ ಘೋಷಿಸಿದೆ.
ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಅವರಿಂದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರಿಗೆ ಅಂತಿಮ ನಮನ.
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟಿಸಿದ್ದಾರೆ.
ಇಂದು ನಿಧನರಾದ ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು. ಓಂ ಶಾಂತಿಃ
ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ನಮ್ಮನ್ನಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಪೂಜ್ಯರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಅಪಾರ ಸಂಖ್ಯೆಯ ಭಕ್ತರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಎಂದು ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಶ್ರವಣಬೆಳಗೊಳದ ಜೈನಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ವಿಧಿವಶರಾದ ಸುದ್ದಿ ತಿಳಿದು ಅತೀವ ನೋವಾಯಿತು. ಧಾರ್ಮಿಕ ಚಟುವಟಿಕೆಗಳ ಜೊತೆ ಶಿಕ್ಷಣ, ಸಮಾಜ ಸುಧಾರಣೆಗಾಗಿ ದುಡಿಯುತ್ತಿದ್ದ ಶ್ರೀಗಳ ಅಗಲಿಕೆಯಿಂದ ಸಮಾಜ ಬಡವಾಗಿದೆ. ಶ್ರೀಗಳ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಮಠದ ಅನುಯಾಯಿಗಳಿಗೆ ದೇವರು ಕರುಣಿಸಲಿ.
ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.
ಶ್ರೀ ಕ್ಷೇತ್ರ ಶ್ರವಣಬೆಳಗೊಳದ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮೀಜಿಯವರು ಜಿನೈಕರಾಗಿರುವ ಸುದ್ದಿಯು ಅತ್ಯಂತ ವಿಷಾದನೀಯ. ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಹಾಗೂ ಅವರ ಅಪಾರ ಭಕ್ತಸಮೂಹಕ್ಕೆ ಅಗಲಿಕೆ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ.
ಎಂದು ಕರ್ನಾಟಕ ಕಾಂಗ್ರೆಸ್ ಸಂತಾಪ ಸೂಚಿಸಿದೆ.
ಜನಹಿತ ಮತ್ತು ಆಧ್ಯಾತ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡ ಶ್ರವಣಬೆಳಗೊಳ ಜೈನ ಮಠದ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ. ಓಂ ಶಾಂತಿಃ
ಎಂದು ಕರ್ನಾಟಕ ಬಿಜೆಪಿ ಸಂತಾಪ ಸೂಚಿಸಿದೆ.
ಶ್ರವಣಬೆಳಗೊಳದ ಶ್ರೀ ಜೈನಪೀಠದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಅವರು ಅಗಲಿದ ವಿಷಯ ಕೇಳಿ ನನಗೆ ತೀವ್ರ ಆಘಾತ ಉಂಟಾಗಿದೆ. ಶ್ರೀ ಭಗವಾನ್ ಬಾಹುಬಲಿ ಅವರ ಶಾಂತಿ, ಅಹಿಂಸೆ, ಸಹನೆ ತತ್ವಗಳನ್ನು ಪಸರಿಸುತ್ತಾ ಜನರಲ್ಲಿ ಅರಿವಿನ ಬೆಳಕು ಮೂಡಿಸಿದ್ದ ಪರಮಪೂಜ್ಯರು ನಾಡಿಗೆ ಅಪಾರ ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಮಠದ ಭಕ್ತರು, ನಾಡಿನ ಜನರಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.