ಚಿಕ್ಕಮಗಳೂರು ಜಿಲ್ಲೆಯಲ್ಲಿ ಯಾವ ಪಕ್ಷಕ್ಕೆ ಮುನ್ನಡೆ..? – ಚುನಾವಣಾಪೂರ್ವ ಸಮೀಕ್ಷೆ

ಕರ್ನಾಟಕ ವಿಧಾನಸಭಾ ಚುನಾವಣೆ ಹೊತ್ತಲ್ಲಿ ಜಿಲ್ಲಾವಾರು ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟವಾಗಿದೆ. 

ಚಿಕ್ಕಮಗಳೂರು ಜಿಲ್ಲೆಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳಿವೆ.

2018ರ ಚುನಾವಣೆಯಲ್ಲಿ ಕಾಂಗ್ರೆಸ್​ ಕೇವಲ 1 ಮತ್ತು ಉಳಿದ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿತ್ತು.

ಶೃಂಗೇರಿಯಲ್ಲಿ ಮಾತ್ರ ಶಾಸಕ ರಾಜೇಗೌಡ ಗೆದ್ದಿದ್ದರೆ, ಚಿಕ್ಕಮಗಳೂರು, ಕಡೂರು, ತರೀಕೆರೆ, ಮೂಡಿಗೆರೆ ಎಸ್​ಸಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿತ್ತು.

ಈ ಬಾರಿ ಹೇಗಿದೆ ಲೆಕ್ಕಾಚಾರ..?

ಗುರುರಾಜ್​ ಅಂಜನ್​ ಅವರು ನಡೆಸಿರುವ ಚುನಾವಣಾ ಸಮೀಕ್ಷೆಯ ಪ್ರಕಾರ:

ಚಿಕ್ಕಮಗಳೂರು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದ ಪೈಕಿ ಕಾಂಗ್ರೆಸ್​ ಮೂರು ಮತ್ತು ಬಿಜೆಪಿ ಎರಡು ಕ್ಷೇತ್ರಗಳಲ್ಲಿ ಗೆಲ್ಲಲಿದೆ.

ಕಾಂಗ್ರೆಸ್​ 2 ಸ್ಥಾನಗಳು ಲಾಭ ಆಗಲಿದ್ದು, ಬಿಜೆಪಿ ಎರಡು ಸ್ಥಾನಗಳನ್ನು ಕಳೆದುಕೊಳ್ಳಲಿದೆ.

ಯಾವ ಕ್ಷೇತ್ರ ಯಾವ ಪಕ್ಷ ಗೆಲ್ಲಬಹುದು..?

ಇವರ ಅಂದಾಜಿನ ಪ್ರಕಾರ ಮೂಡಿಗೆರೆ ಎಸ್​ಸಿ ಮೀಸಲು ಕ್ಷೇತ್ರ, ಶೃಂಗೇರಿ ಮತ್ತು ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಗೆಲ್ಲಬಹುದು ಎಂದು ಅಂದಾಜಿಸಿದ್ದಾರೆ.

ಚಿಕ್ಕಮಗಳೂರು ಮತ್ತು ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೆ ಬಿಜೆಪಿಯೇ ಗೆಲ್ಲಬಹುದು ಎಂದು ಗುರುರಾಜ್​ ಅಂಜನ್​ ಅಂದಾಜಿಸಿದ್ದಾರೆ.

LEAVE A REPLY

Please enter your comment!
Please enter your name here