ಚಿಕ್ಕಮಗಳೂರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.
ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಮತ್ತು ಕಾರ್ಯದರ್ಶಿ ನಿತೀಶ್ ಗುಂಪುಗಳ ಮಧ್ಯೆ ಕಿರಿಕ್ ಉಂಟಾಗಿದೆ. ಸಂತೋಷ್ ಕಾರ್ಯದರ್ಶಿ ಹುದ್ದೆಯಿಂದ ನಿತೀಶ್ನನ್ನು ತೆಗೆದು ಹಾಕಿದ್ದರು. ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆದಿದೆ.
ಈ ಬೆಳವಣಿಗೆಯಿಂದ ಬೇಸತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ರಾಜೀನಾಮೆಗೆ ಮುಂದಾಗಿದ್ದಾರೆ. ಸದ್ಯ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲಿನಂತಾಗಿದೆ.