ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಈ ವಾರಾಂತ್ಯಕ್ಕೆ ಬರದಂತೆ ಪ್ರವಾಸಿಗರಿಗೆ ಜಿಲ್ಲಾಡಳಿತ ಮನವಿ ಮಾಡಿದೆ.
ಜುಲೈ 28ರಿಂದ ಜುಲೈ 31ರವರೆಗೆ ಅಂದರೆ ಸೋಮವಾರದವರೆಗೆ ಬರದಂತೆ ಪ್ರವಾಸಿಗರಿಗೆ ಮನವಿ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಚಂದ್ರದೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ ಮತ್ತು ಸುತ್ತಮುತ್ತಲಿನ ಗಿರಿಶ್ರೇಣಿ ಪ್ರದೇಶಗಳಲ್ಲಿ ಅತಿಯಾಗಿ ಮಳೆಯಾಗುತ್ತಿರುವುದರಿಂದ ಕೆಲವು ಸ್ಥಳಗಳಲ್ಲಿ ಅಲ್ಲಲ್ಲಿ ಗುಡ್ಡಗಳು ಕುಸಿಯುತ್ತಿವೆ. ರಸ್ತೆ ಬದಿಯಲ್ಲಿರುವ ಮರಗಳು ಮತ್ತು ವಿದ್ಯುತ್ ಕಂಬಗಳು ಬಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ.
ಗಿರಿಶ್ರೇಣಿಯಲ್ಲಿರುವ ಜಲಪಾತಗಳು ರಭಸವಾಗಿ ಹರಿಯುತ್ತಿರುವುದರಿಂದ ಜಲಪಾತಗಳಲ್ಲಿ ಫೋಟೋ ತೆಗೆಯುವ ಸಂದರ್ಭದಲ್ಲಿ ಅನಾಹುತಗಳು ಉಂಟಾಗುವ ಸಾಧ್ಯತೆ ಇದೆ.
ಮುಂಜಾಗ್ರತ ಕ್ರಮವಾಗಿ ಅನಾಹುತ ಮತ್ತು ಪ್ರಾಣಹಾನಿ ಉಂಟಾಗುವುದನ್ನು ತಪ್ಪಿಸಲು ಪ್ರವಾಸಿಗರು ತಮ್ಮ ಪ್ರವಾಸವನ್ನು ಕೈಗೊಳ್ಳದಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ADVERTISEMENT
ADVERTISEMENT