ಚೀನಾದಲ್ಲಿ ಮಕ್ಕಳಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಳ್ಳುತ್ತಿರುವ ಹೊತ್ತಲ್ಲಿ ಭಾರತದಲ್ಲಿ ಆತಂಕ ಪಡಬೇಕಾದ ಅಗತ್ಯ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
ಚೀನಾದಲ್ಲಿ ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಳ್ಳುತ್ತಿರುವರ ಬಗ್ಗೆ ನಿಗಾ ಇಟ್ಟಿದ್ದೇವೆ. ಭಾರತದಲ್ಲಿ ಇದರ ಅಪಾಯ ಅಷ್ಟಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ಚೀನಾದಲ್ಲಿ ಆಗಿರುವ H9N2 ವೈರಸ್ ಹಬ್ಬುವಿಕೆ ಬಗ್ಗೆಯೂ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವಾಲಯ ಎಂತಹ ಪರಿಸ್ಥಿತಿಯನ್ನೂ ಎದುರಿಸಲು ಸಚಿವಾಲಯದ ಸಿದ್ಧವಾಗಿದೆ ಎಂದು ಹೇಳಿದೆ.
ಚೀನಾದಿಂದ ಕೋವಿಡ್-೧೯ ವೈರಸ್ ಹಬ್ಬಿದ್ದ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಚೀನಾದಲ್ಲಿ ಈಗ ಮಕ್ಕಳಲ್ಲಿ ಕಾಣಿಸಿಕೊಂಡಿರುವ ಉಸಿರಾಟದ ಬಗ್ಗೆ ಮುನ್ನೆಚ್ಚರಿಕೆ ಕ್ರಮವಾಗಿ ಮಾಹಿತಿಯನ್ನು ಕೇಳಿದೆ.
ADVERTISEMENT
ADVERTISEMENT