ADVERTISEMENT
ಕೃಷಿ ಸಚಿವ ಚಲುವರಾಯಸ್ವಾಮಿ ಅವರ ವಿರುದ್ಧದ ನಕಲಿ ಪತ್ರದ ತನಿಖೆಯನ್ನು ಸಿಎಂ ಸಿದ್ದರಾಮಯ್ಯ ಅವರು ಸಿಐಡಿಗೆ ಒಪ್ಪಿಸಿದ್ದಾರೆ.
ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರ ಜೊತೆಗಿನ ಚರ್ಚೆ ಬಳಿಕ ಸಿಐಡಿ ತನಿಖೆಗೆ ಒಪ್ಪಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ಮಂಡ್ಯದ ಜಂಟಿ ನಿರ್ದೇಶಕರ ಹೆಸರಲ್ಲಿ ಸಚಿವರ ವಿರುದ್ಧ ಲಂಚದ ಆರೋಪ ಮಾಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಲಾಗಿತ್ತು.
ಆ ಪತ್ರದ ಬಗ್ಗೆ ಗಮನಹರಿಸುವಂತೆ ರಾಜ್ಯಪಾಲರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಿದ್ದರು.
ಪತ್ರ ನಕಲಿ ಎಂದು ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರ ಹೇಳಿದ್ದು, ಪತ್ರದ ಸೃಷ್ಟಿಕರ್ತರು ಬಿಜೆಪಿಯೋ ಅಥವಾ ಅವರ ಬ್ರದರೋ ಎಂದು ಪರೋಕ್ಷವಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಕುಟುಕಿದ್ದರು.
ADVERTISEMENT