ವಿಧಾನಸಭಾ ಚುನಾವಣೆ ಹಿನ್ನೆಲೆ: ನಾಳೆಯೇ ಸಂಬಳ ಹೆಚ್ಚಳದ ಘೋಷಣೆ ಹೊರಬೀಳುತ್ತಾ..?

CM Basavaraj Bommai
CM Basavaraj Bommai

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರಿ ಸಾರಿಗೆ ಸಿಬ್ಬಂದಿ ಸಮಾಧಾನಪಡಿಸುವ ಯತ್ನಕ್ಕೆ ಬಿಜೆಪಿ ಸರ್ಕಾರ ಕೊನೆ ಕ್ಷಣದಲ್ಲಿ ಮುಂದಾಗಿದೆ.

ನಾಳೆ ಅಂದರೆ ಫೆಬ್ರವರಿ 27ರ ಸೋಮವಾರದಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಸಾರಿಗೆ ಸಿಬ್ಬಂದಿಯನ್ನು ಪ್ರತಿನಿಧಿಸುವ ಕಾರ್ಮಿಕ ಸಂಘಟನೆಗಳ ಸಭೆ ಕರೆದಿದ್ದಾರೆ.

ವೇತನ ಹೆಚ್ಚಳ ಸಂಬಂಧ ವಾರದ ಹಿಂದೆಯಷ್ಟೇ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿ ಪರವಾಗಿ ಸಿಎಂ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಗಿತ್ತು.

ಫೆಬ್ರವರಿ 21ರಂದು ಸಲ್ಲಿಸಿರುವ ಮನವಿಯನ್ನು ತುರ್ತಾಗಿ ಪರಿಗಣಿಸಿರುವ ಸಿಎಂ ಬೊಮ್ಮಾಯಿ ನಾಳೆ ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ.

ಈ ಸಭೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ವ್ಯವಸ್ಥಾಪ ನಿರ್ದೇಶಕರು (MD) ಮತ್ತು ಜಂಟಿ ಕ್ರಿಯಾ ಸಮಿತಿಯ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಮುಖ್ಯ ಕಾರ್ಮಿಕ ಮತ್ತು ಕಲ್ಯಾಧಿಕಾರಿ ಸಭೆ ಸೂಚನಾ ಪತ್ರದಲ್ಲಿ ತಿಳಿಸಿದ್ದಾರೆ. 

LEAVE A REPLY

Please enter your comment!
Please enter your name here