ಮುಖ್ಯಮಂತ್ರಿ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಸಾವು – ಜಿಮ್​ನಲ್ಲಿ ಕುಸಿದು ನಿಧನ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavarj Bommai) ಅವರ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ (Gurulingaswamy) ನಿಧನರಾಗಿದ್ದಾರೆ. ಇವರಿಗೆ 45 ವರ್ಷ ವಯಸ್ಸಾಗಿತ್ತು.
ಇವತ್ತು ಬೆಳಗ್ಗೆ ಜಿಮ್​ಗೆ ಹೋಗಿದ್ದಾಗ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದರು.
ತಕ್ಷಣವೇ ಅವರನ್ನು ನಾಗರಭಾವಿಯಲ್ಲಿರುವ ಯೂನಿಟಿ ಲೈಫ್​ ಆಸ್ಪತ್ರೆಗೆ ದಾಖಲಿಸಲಾಯಿತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಗುರುಲಿಂಗಸ್ವಾಮಿ ಅವರು ಟಿವಿ5, ವಿಜಯವಾಣಿ, ಈಟಿವಿಯಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ಮಾಡಿದ್ದರು.

LEAVE A REPLY

Please enter your comment!
Please enter your name here