ಒಂದ್ಕಡೆ ರಾಜ್ಯದಲ್ಲಿ ಪ್ರವಾಹ ಸೃಷ್ಟಿ ಆಗಿದ್ದರೆ ಅತ್ತ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇವತ್ತು ದಿಢೀರ್ ದೆಹಲಿಗೆ ಪ್ರಯಾಣಸುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಆಗುವ ನಿರೀಕ್ಷೆ ಇದೆ.
ರಾಜಸ್ಥಾನ ರಾಜಧಾನಿ ಜೈಪುರದಲ್ಲಿ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಮೂರು ದಿನಗಳ ಮಹತ್ವದ ಸಭೆ ನಡೆಯುತ್ತಿದ್ದು, ಆ ಸಭೆ ನಾಳೆ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಜೈಪುರದಲ್ಲಿದ್ದಾರೆ.
ಮುಖ್ಯಮಂತ್ರಿಗಳ ದಿಢೀರ್ ಪ್ರವಾಸ ರಾಜ್ಯ ರಾಜಕೀಯದಲ್ಲಿ ಮತ್ತೆ ಮಹತ್ವ ಪಡೆದಿದೆ.
ನಿನ್ನೆ ರಾತ್ರಿ ಸಚಿವರೊಬ್ಬರ ಮನೆಯಲ್ಲಿ ಸಿಎಂ ಬೊಮ್ಮಾಯಿ ರಹಸ್ಯ ಸಭೆ ನಡೆಸಿದ್ದರು. ಆ ಸಭೆಯಲ್ಲಿ ಲೋಕೋಪಯೋಗಿ ಸಚಿವ ಸಿ ಟಿ ಪಾಟೀಲ್, ಕಂದಾಯ ಸಚಿವ ಆರ್ ಅಶೋಕ್ ಕೂಡಾ ಭಾಗಿ ಆಗಿದ್ದರು ಎನ್ನಲಾಗಿದೆ.
ತಮ್ಮ ದೆಹಲಿ ಪ್ರವಾಸದ ಬಗ್ಗೆ ಸಿಎಂ ಬೊಮ್ಮಾಯಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.