ನಾಳೆ ಗುರುವಾರ ಬೆಳಿಗ್ಗೆ ನಡೆಯಬೇಕಿದ್ದ ಸಂಪುಟ ಸಭೆಯನ್ನು ದಿಡೀರ್ ಮುಂದೂಡಿಕೆ ಮಾಡಲಾಗಿದೆ.
ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ನಾಳೆಬೆಳಿಗ್ಗೆ 11.30 ಕ್ಕೆ ಸಂಪುಟ ಸಭೆ ನಿಗದಿಯಾಗಿತ್ತು.
ಆದರೆ, ಇದೀಗ ಅದನ್ನು ದಿಡೀರ್ ರದ್ದುಪಡಿಸಿ ಮೇ 11 ರ ಬೆಳಿಗ್ಗೆ 11 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಸಚಿವ ಸಂಪುಟ ವಿಭಾಗದ ಜಂಟಿ ಕಾರ್ಯದರ್ಶಿ ಆರ್. ಚಂದ್ರಶೇಖರ್ ಬುಧವಾರ ಪರಿಷ್ಕೃತ ಸೂಚನಾ ಪತ್ರ ಹೊರಡಿಸಿದ್ದಾರೆ.
ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನರ್ ರಚನೆ ಕುರಿತು ಬಿಜೆಪಿಯಲ್ಲಿ ತೀವ್ರಮಟ್ಟದ ಚರ್ಚೆ ನಡೆಯುತ್ತಿದೆ. ಮೇ 10 ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆ ಇರುವುದರಿಂದ ನಾಳೆ ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ನಿನ್ನೆಯಷ್ಟೇ ರಾಜ್ಯಕ್ಕೆ ಬಂದಿದ್ದ ಗೃಹ ಸಚಿವ ಅಮಿತ್ ಶಾ ಅವರು ಸಚಿವ ಸಂಪುಟಕ್ಕೆ ಸಂಬಮಧಿಸಿದಂತೆ ಒಂದು ಸು್ತತಿನ ಮಾತುಕತೆಯನ್ನು ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ವಿದೇಶ ಪ್ರವಾಸದಿಂದ ಬಂದ ಬಳಿಕ ನೂತನ ಸಚಿವರ ಪಟ್ಟಿಗೆ ಒಪ್ಪಿಗೆ ಮುದ್ರೆ ಬೀಳಲಿದೆ ಎಂದು ತಿಳಿದುಬಂದಿದೆ.