ADVERTISEMENT
ನಾನು, ನನ್ನಂಥವರು ಶಾಸಕರಾಗಲು, ಮುಖ್ಯಮಂತ್ರಿ ಆಗಲು ಡಾ.ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಕಾರಣ. ಸಂವಿಧಾನ ಇಲ್ಲದಿದ್ದರೆ ಸಿ.ಟಿ.ರವಿ, ಕೆ.ಎಸ್.ಈಶ್ವರಪ್ಪ, ನಾನು ಎಲ್ಲೋ ಕುರಿ, ಹಸು ಕಾಯುತ್ತಾ ಇರಬೇಕಾಗಿತ್ತು. ಆದ್ದರಿಂದ ಸಂವಿಧಾನದ ಮೌಲ್ಯ ಅರಿತುಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾದ ಶಾಸಕರುಗಳ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು
ವಾಟಾಳ್ ಮಾಡೆಲ್ :
ವಾಟಾಳ್ ನಾಗರಾಜ್ ಅವರು ಒಬ್ಬ ಮಾದರಿ ಶಾಸಕರಾಗಿದ್ದರು. ಅಧಿವೇಶನದ ಬೆಲ್ ಆಗುತ್ತಿದ್ದಂತೆ ಸದನದ ಒಳಗೆ ಬಂದು ಕೂರುತ್ತಿದ್ದರು. ಅಧಿವೇಶನ ಮುಗಿಯುವವರೆಗೂ ಅಲುಗಾಡದೆ ಕೂರುತ್ತಿದ್ದರು. ಇದನ್ನು ಪ್ರತಿಯೊಬ್ಬರೂ ಪಾಲಿಸಿ ಎಂದು ಸೂಚಿಸಿದರು.
ADVERTISEMENT