ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ತನಿಖಾಸ್ತ್ರ ಮುಂದುವರಿಸಿದೆ.
ಸಹಾಯಕ ಸರ್ಕಾರಿ ಅಭಿಯೋಜಕರು ಮತ್ತು ಸಹಾಯಕ ಸರ್ಕಾರಿ ವಕೀಲರ ನೇಮಕಾತಿಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ಇಲಾಖಾ ತನಿಖೆ ನಡೆಸಿ ತಪ್ಪಿತಸ್ಥರ ವಿವರಗಳೊಂದಿಗೆ 10 ದಿನದೊಳಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಸೂಚಿಸಿದ್ದಾರೆ.
ದಿನಾಂಕ 23-07-2022 ಮತ್ತು 24-07-2022ರಂದು ನಡೆದ ಎಪಿಪಿ ಮತ್ತು ಎಜಿಪಿ (ಸಹಾಯಕ ಸರ್ಕಾರಿ ಅಭಿಯೋಜಕರು ವ ಸಹಾಯಕ ಸರ್ಕಾರಿ ವಕೀಲರ) ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರ ಅಕ್ರಮಗಳು ನಡೆದಿರುವುದಾಗಿ ವ್ಯಾಪಕವಾದ ದೂರುಗಳು ಸಲ್ಲಿಕೆಯಾಗಿರುತ್ತದೆ. ಈ ಬಗ್ಗೆ ಕೂಡಲೇ ನಿರ್ದಾಕ್ಷಿಣ್ಯವಾದ ಇಲಾಖಾ ತನಿಖೆ ನಡೆಸಿ ತಪ್ಪಿತಸ್ಥರ ವಿವರಗಳೊಂದಿಗೆ 10 ದಿನದೊಳಗಾಗಿ ವರದಿ ಸಲ್ಲಿಸುವಂತೆ ಸೂಚಿಸಿದೆ
ಎಂದು ಸಿಎಂ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿಗೆ ಆದೇಶಿಸಿ ಪತ್ರ ಬರೆದಿದ್ದಾರೆ.
ADVERTISEMENT
ADVERTISEMENT