ಕರ್ನಾಟಕದಲ್ಲಿ ಜಾತಿ ಗಣತಿ ಜಾರಿ ನಿರ್ಧಾರ ಅಚಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಜಾತಿ ಗಣತಿ ಜಾರಿಗೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಒಳಗೊಂಡು ಕಾಂಗ್ರೆಸ್ ಸರ್ಕಾರದ ಸಚಿವರೂ ಒಳಗೊಂಡಂತೆ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದ ರಾಜಕೀಯ ನಾಯಕರು ವಿರೋಧ ವ್ಯಕ್ತಪಡಿಸಿ ಹಿಂದುಳಿದ ವರ್ಗಕ್ಕೆ ಪತ್ರ ಬರೆದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.
ನಮ್ಮ ಹೆಮ್ಮೆಯ ನಾಯಕರಾದ ರಾಹುಲ್ ಗಾಂಧಿಯವರ ನಿಲುವಿಗೆ ನನ್ನ ಪೂರ್ಣ ಸಹಮತವಿದೆ. ದೇಶಾದ್ಯಂತ ಜಾತಿಗಣತಿ ನಡೆದು, ಅದರ ವರದಿಯ ಆಧಾರದ ಮೇಲೆ “ಸರ್ವರಿಗೂ ಸಮಪಾಲು – ಸರ್ವರಿಗೂ ಸಮಬಾಳು” ದಕ್ಕಿದಾಗಲೇ ದೇಶಕ್ಕೆ ದೊರೆತ ಸ್ವಾತಂತ್ರ್ಯ ಸಾರ್ಥಕವಾಗಲಿದೆ ಎಂಬುದು ನನ್ನ ಭಾವನೆ.
ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನಡೆಸಿದ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸ್ವೀಕರಿಸಿ, ಅವಕಾಶಗಳಿಂದ ವಂಚಿತವಾದ ಸಮುದಾಯಗಳಿಗೆ ನ್ಯಾಯ ಕೊಡಿಸುವ ನನ್ನ ನಿರ್ಧಾರ ಅಚಲವಾಗಿದೆ
ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ADVERTISEMENT
ADVERTISEMENT