ಕರ್ನಾಟಕದಲ್ಲಿ ಹಿಜಾಬ್ ನಿಷೇಧ ರದ್ದುಗೊಳಿಸೋ ಕುರಿತಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಈಗಾಗಲೇ ರಾಜ್ಯದಲ್ಲಿ ಕಿಡಿ ಹೊತ್ತಿಸಿದೆ. ಪ್ರಸ್ತುತದಲ್ಲಿ ಈ ವಿಚಾರ ಪ್ರಸ್ತಾಪವಾಗಿದ್ದಾದ್ರೂ ಯಾಕೆ ಅನ್ನೋ ಪ್ರಶ್ನೆಗೆ ಖುದ್ದು ಸಿಎಂ ಸಿದ್ದರಾಮಯ್ಯನವರೇ ಸ್ಪಷ್ಟನೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಹಿಜಾಬ್ ನಿಷೇಧ ಆದೇಶ ಇನ್ನೂ ವಾಪಸ್ ಪಡೆದಿಲ್ಲ, ಹಿಜಾಬ್ ನಿಷೇಧ ಆದೇಶ ವಾಪಸ್ಗೆ ಯೋಚನೆ ಮಾಡಿದ್ದೇವೆ. ಸರ್ಕಾರದಲ್ಲಿ ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ. ಇನ್ನು ಹಿಜಾಬ್ ಕುರಿತಾಗಿ ಮೈಸೂರಿನ ಕವಲಂದೆಯಲ್ಲಿ ನಿನ್ನೆ ಯಾರೋ ಒಬ್ಬರು ಪ್ರಶ್ನೆ ಕೇಳಿದಾಗ ನಾನು ಉತ್ತರಿಸಿದ್ದೇನೆ ಅಷ್ಟೇ ಅಂತ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.