ಕುಮಾರಸ್ವಾಮಿ ಹತಾಶರಾಗಿದ್ದಾರೆ, ಆರೋಪಗಳೆಲ್ಲವೂ ಹಿಟ್​ ಅಂಡ್​ ರನ್​: ಸಿಎಂ ಸಿದ್ದರಾಮಯ್ಯ ತಿರುಗೇಟು

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹತಾಶರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಅವರು ವರ್ಗಾವಣೆಗಳ ಬಗ್ಗೆ ಹತಾಶರಾಗಿದ್ದಾರೆ.
ಸರ್ಕಾರ ವರ್ಗಾವಣೆ ಮಾಡಲೇಬೇಕು, ಮಾಡುತ್ತಿದೆ. ಅದಕ್ಕೆ ಧಂಧೆ ನಡೆದಿದೆ, ಲಂಚ ಪಡೆದಿದ್ದಾರೆ ಎನ್ನುವುದು ಸುಳ್ಳು ಆರೋಪ. ಅವರ ಕಾಲದಲ್ಲಿಯೂ ವರ್ಗಾವಣೆ ಆಗಿದ್ದವು. ಅವರು ದುಡ್ಡು ಪಡೆದಿದ್ರೆ..? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ವರ್ಗಾವಣೆ ಬಗ್ಗೆ ಊಹೆ ಮೇಲೆ ಹೇಳಲಾಗುವುದಿಲ್ಲ. ಹೊಸ ಸರ್ಕಾರ ಬಂದಿದೆ. ವರ್ಗಾವಣೆಯನ್ನು ಆಡಳಿದ ಹಿತದೃಷ್ಟಿಯಿಂದ ಮಾಡಬೇಕು. ಮಾರ್ಚ್ , ಏಪ್ರಿಲ್ ನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ವರ್ಗಾವಣೆ ಆಗಿರಲಿಲ್ಲ. ಈಗ ಸಾಮಾನ್ಯ ವರ್ಗಾವಣೆಗಳಾಗುತ್ತಿವೆ ಎಂದರು.

ಕುಮಾರಸ್ವಾಮಿ ಆರೋಪಗಳು ಹಿಟ್ ಅಂಡ್ ರನ್:

ಕುಮಾರಸ್ವಾಮಿ ಅವರ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ. ಅವರು ಮಾಡಿರುವ ಯಾವ ಆರೋಪಗಳನ್ನು ತಾರ್ತಿಕ ಅಂತ್ಯಕ್ಕೆ ಕೊಂಡೊಯ್ದಿದ್ದಾರೆ..? ಎಂದು ಪ್ರಶ್ನಿಸಿದರು.

ಮಾಜಿ ಶಾಸಕ ಯತೀಂದ್ರ ಅವರ ಮೇಲೆ ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಅವರ ಮನೆ ಮಗ, ಅವರ ಅಣ್ಣ ಸಚಿವರಾಗಿದ್ದವರು, ಅವರ ಪತ್ನಿ ಶಾಸಕರು,ಅವರ ತಂದೆ ಪ್ರಧಾನಿಗಳಾಗಿದ್ದವರು, ಅವರ ಅಣ್ಣನ ಮಕ್ಕಳು ಶಾಸಕರಾಗಿದ್ದಾರಲ್ಲ, ಅವರನ್ನು ಏನಂತ ಕರೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದರು.

LEAVE A REPLY

Please enter your comment!
Please enter your name here