ಪ್ರಧಾನಿ ನರೇಂದ್ರ ಮೋದಿ-ಸಿಎಂ ಸಿದ್ದರಾಮಯ್ಯ ಮೊದಲ ಭೇಟಿ..?

ಜೂನ್​ 21ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ. 

ಮುಂದಿನ ವಾರ ಸಿದ್ದರಾಮಯ್ಯ ಅವರು ಕಾಂಗ್ರೆಸ್​ ದೆಹಲಿ ನಾಯಕರ ಭೇಟಿಗಾಗಿ ದೆಹಲಿಗೆ ಹೋಗುತ್ತಿದ್ದಾರೆ. 

ಈ ವೇಳೆ ಪ್ರಧಾನಿ ಅವರ ಭೇಟಿಗೂ ಸಮಯ ಕೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಜೊತೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭೇಟಿಗೂ ಸಮಯ ಕೇಳಿದ್ದಾರೆ ಎನ್ನಲಾಗಿದೆ.

ಒಂದು ವೇಳೆ ಪ್ರಧಾನಮಂತ್ರಿ ಮತ್ತು ರಾಷ್ಟ್ರಪತಿಗಳಿಂದ ಭೇಟಿಗೆ ಅವಕಾಶ ಸಿಕ್ಕರೆ ಆಗ ಇದು ಸಿಎಂ ಆದ ಬಳಿಕ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ಮುರ್ಮು ಅವರ ಜೊತೆಗೆ ನಡೆಸಲಿರುವ ಮೊದಲ ಭೇಟಿಯಾಗಲಿದೆ.

ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಕೆ ಮಾಡದಂತೆ ಪ್ರಧಾನಿ ಮೋದಿ ಸರ್ಕಾರ ಆಹಾರ ನಿಗಮಕ್ಕೆ ನೀಡಿರುವ ಆದೇಶ ಮತ್ತು ಕರ್ನಾಟಕದ ತೆರಿಗೆ ಪಾಲಿನಲ್ಲಿ ಕೇಂದ್ರದಿಂದ ಹಂಚಿಕೆ ಆಗಬೇಕಿರುವ ಮೊತ್ತದಲ್ಲಿ ಆಗಿರುವ ಕಡಿತದ ಬಗ್ಗೆಯೂ ಪ್ರಧಾನಿ ಮೋದಿಯವರ ಜೊತೆಗೆ ಸಿಎಂ ಸಿದ್ದರಾಮಯ್ಯ ಅವರು ಚರ್ಚೆ ನಡೆಸಲಿದ್ದಾರೆ.