ಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ. ಆದರೆ ಕಾನೂನಿಗೆ ವಿರುದ್ಧವಾಗಿ ಯಾರಾದರೂ ನಡೆದುಕೊಂಡರೆ ಸಹಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಟು ಎಚ್ಚರಿಕೆ ನೀಡಿದ್ದಾರೆ.
ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಸಂಬಂಧ ಉನ್ನತ ಮಟ್ಟದ ಸಭೆಯ ಬಳಿಕ ಮಾತಾಡಿದ ಸಿಎಂ ಅವರು,
ಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ, ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇದೆ ಆದರೆ ಕಾನೂನಿಗೆ ವಿರುದ್ಧವಾಗಿ ಯಾರಾದರೂ ನಡೆದುಕೊಂಡರೆ ಅದನ್ನು ಸರ್ಕಾರ ಸಹಿಸುವುದಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳ ಬಯಸುತ್ತೇನೆ
3-3-2022ರಲ್ಲಿ ಕರ್ನಾಟಕ ಉಚ್ಛನ್ಯಾಯಾಲಯವು ಪ್ರತಿಭಟನೆಗಳನ್ನು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತ್ರ ನಡೆಸಬೇಕು. ರಾಜ್ಯ ಸರ್ಕಾರವು ಇದನ್ನು ಖಾತರಿಪಡಿಸಬೇಕು ಎಂದು ಸ್ಪಷ್ಟವಾದ ಆದೇಶ ಹೊರಡಿಸಿದೆ
ರಾಜ್ಯದ ಹಿತದೃಷ್ಟಿಯಿಂದ ಶಾಂತಿಯುತ ಪ್ರತಿಭಟನೆ ಮಾಡಿದರೆ ನಾವು ವಿರೋಧಿಸುವುದಿಲ್ಲ. ಆದರೆ ಕಾನೂನು ಕೈಗೆ ತೆಗೆದುಕೊಂಡರೆ ಸರ್ಕಾರ ಕ್ರಮ ಕೈಗೊಳ್ಳಲಿದೆ.
ಸಂಘಟನೆಯಿರಲಿ, ವ್ಯಕ್ತಿಗಳಿರಲಿ, ಖಾಸಗಿ ಸಂಸ್ಥೆಗಳಿರಲಿ ಯಾರಾದರೂ ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬೇಡಿ ಎಂದು ಮನವಿ ಮಾಡುತ್ತೇನೆ
ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಕಾಯ್ದೆ ಜಾರಿ ಮಾಡುತ್ತೇವೆ. ಅಲ್ಲಿಯವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.