ಪ್ರತಾಪ್ ಸಿಂಹ ವಿರುದ್ಧ ಪೋಸ್ಟ್; ಮುಖ್ಯಪೇದೆ ಅಮಾನತು

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್​ಗಳನ್ನು ಹಾಕುತ್ತಿದ್ದ ಆರೋಪದ ಮೇರೆಗೆ ಮೈಸೂರಿನ ವಿವಿ ಪುರಂ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್​ಟೇಬಲ್ ಬಿ ಪ್ರಕಾಶ್​ರನ್ನು ಸೇವೆಯಿಂದ ಅಮಾನತು ಮಾಡಿ ಮೈಸೂರು ಪೊಲೀಸ್ ಆಯುಕ್ತ ರಮೇಶ್ ಭಾನೋತ್​ ಜೂನ್ 30ರಂದು ಆದೇಶ ಹೊರಡಿಸಿದ್ದಾರೆ.

ನ್ಯೂಸ್​-1 ಕನ್ನಡ ವಾಹಿನಿಯ ಫೇಸ್​ಬುಕ್ ಪೇಜ್​ನಲ್ಲಿ ಸಂಸದ ಪ್ರತಾಪ್ ಸಿಂಹಗೆ ಸಂಬಂಧಿಸಿದ ಸುದ್ದಿ ಪ್ರಕಟವಾಗಿತ್ತು. ಈ ಸುದ್ದಿಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ವಿವಿ ಪುರಂ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್​ಟೇಬಲ್ ಬಿ ಪ್ರಕಾಶ್​ ಸಂಸದರ ವಿರುದ್ಧ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ್ದರು.

ಈ ಸಂಬಂಧ ವಿವಿ ಪುರಂ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್​ಟೇಬಲ್ ಬಿ ಪ್ರಕಾಶ್​ ವಿರುದ್ಧ ಕ್ರಮಕ್ಕೆ ಕೋರಿ ಜೂನ್ 30ರಂದು ಸ್ಕ್ರೀನ್ ಶಾಟ್ ಸಮೇತ ಮೈಸೂರು ಪೊಲೀಸ್ ಆಯುಕ್ತರಿಗೆ ಸಂಸದ ಪ್ರತಾಪ್ ಸಿಂಹ ದೂರು ನೀಡಿದ್ದರು.

 

ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಆಯುಕ್ತ ರಮೇಶ್ ವಿ ಭಾನೋತ್ ಅದೇ ದಿನ ತಕ್ಷಣದಿಂದ ಜಾರಿಗೆ ಬರುವಂತೆ, ಇಲಾಖಾ ವಿಚಾರಣೆ ಬಾಕಿ ಇರುವಂತೆಯೇ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಅಮಾನತು ಅವಧಿಯಲ್ಲಿ ಪೂರ್ವಾನುಮತಿ ಇಲ್ಲದೇ ಕೇಂದ್ರ ಸ್ಥಾನವನ್ನು ಬಿಡಬಾರದು. ರಜೆಯ ಸೌಲಭ್ಯಗಳನ್ನು ಪಡೆಯಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.