ಗ್ಯಾರಂಟಿ ಯೋಜನೆಗಳ ಬಗ್ಗೆ ಕೆಲ ಮಾಧ್ಯಮಗಳು, BJPಯಿಂದ ಸುಳ್ಳು ಸುದ್ದಿ – Congress

ಬಾಡಿಗೆದಾರರಿಗೆ ಉಚಿತ ವಿದ್ಯುತ್​ ಸೌಲಭ್ಯ ಸಿಗಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸಿರುವ ಕೆಲವು ಮಾಧ್ಯಮಗಳ ಬಗ್ಗೆ ಕಾಂಗ್ರೆಸ್​ ಅಸಮಾಧಾನ ವ್ಯಕ್ತಪಡಿಸಿದೆ.
ಕೆಲವು ಮಾಧ್ಯಮಗಳು ಹಾಗೂ ಬಿಜೆಪಿ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದು, ಸಾರ್ವಜನಿಕರು ಅದಕ್ಕೆ ಬಲಿಯಾಗಬಾರದು ಎಂದು ಕಾಂಗ್ರೆಸ್​ ಮನವಿ ಮಾಡಿದೆ.
ನಮ್ಮ ಗ್ಯಾರಂಟಿ ಯೋಜನೆಗಳು ಸಮಾಜ ಕಲ್ಯಾಣದ ಕಾರ್ಯಕ್ರಮಗಳಾಗಿವೆ. ಗೃಹಜ್ಯೋತಿ ಯೋಜನೆಯು ಬಾಡಿಗೆ ಮನೆಯಲ್ಲಿ ವಾಸಿಸುವವರಿಗೂ ಅನ್ವಯವಾಗಲಿದೆ. ಕೆಲವು ಮಾಧ್ಯಮಗಳು ಹಾಗೂ ಬಿಜೆಪಿ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದು, ಸಾರ್ವಜನಿಕರು ಅದಕ್ಕೆ ಬಲಿಯಾಗಬಾರದು. ಬಾಡಿಗೆ ಮನೆಯ ವಾಸಿಗಳು ಈ ಕೆಳಕಂಡ ಮಾರ್ಗಸೂಚಿಯನ್ನು ಅನುಸರಿಸಿ ಯೋಜನೆಯ ಪ್ರಯೋಜನ ಪಡೆಯಬಹುದು.
ಎಂದು ಕರ್ನಾಟಕ ಕಾಂಗ್ರೆಸ್​ ಸ್ಪಷ್ಟಪಡಿಸಿದೆ.