ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಇವತ್ತು ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯಲಿದೆ.
ಮೂಲಗಳ ಪ್ರಕಾರ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ರಾಜಾಜಿನಗರ ಕ್ಷೇತ್ರದಿಂದ ಮಾಜಿ ಎಂಎಲ್ಸಿ ಪುಟ್ಟಣ್ಣ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ತೀರ್ಮಾನಿಸಿದೆ.
ಗುಂಡ್ಲುಪೇಟೆ ಕ್ಷೇತ್ರದಿಂದ ಹೆಚ್ ಎಂ ಗಣೇಶ್ಪ್ರಸಾದ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ನಿರ್ಧರಿಸಿದೆ. ಕಳೆದ ಬಾರಿಯೂ ಇವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು.
ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಮಾಜಿ ಶಾಸಕ ಕೆ ಎಸ್ ಕಿರಣ್ಕುಮಾರ್ ಅವರಿಗೆ ಟಿಕೆಟ್ ನೀಡಲು ತೀರ್ಮಾನಿಸಿದೆ.
ಕೆಲ ದಿನಗಳ ಹಿಂದೆಯಷ್ಟೇ ಪುಟ್ಟಣ್ಣ ಅವರು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದರು.
ಚಿಕ್ಕನಾಯಕನಹಳ್ಳಿಯಲ್ಲಿ ಈ ಬಾರಿ ಮತ್ತೆ ಸಚಿವ ಮಾಧುಸ್ವಾಮಿ ಅವರಿಗೆ ಬಿಜೆಪಿ ಟಿಕೆಟ್ ನೀಡಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಕಿರಣ್ ಕುಮಾರ್ ಅವರು ಬಿಜೆಪಿಗೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ಸೇರಿದ್ದರು.
ADVERTISEMENT
ADVERTISEMENT