ADVERTISEMENT
ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ 135 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ಮೂಲಗಳ ಮಾಹಿತಿ ಪ್ರಕಾರ ನಾಲ್ವರು ಕಾಂಗ್ರೆಸ್ ಶಾಸಕರಿಗೆ ಈ ಬಾರಿ ಪಕ್ಷ ಟಿಕೆಟ್ ನೀಡುತ್ತಿಲ್ಲ. ಉಳಿದ ಎಲ್ಲ ಹಾಲಿ ಶಾಸಕರಿಗೆ ಪಕ್ಷ ಟಿಕೆಟ್ ನೀಡುತ್ತಿದೆ.
ಇವತ್ತಿನ ಸಭೆಯಲ್ಲಿ 185 ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಇವುಗಳಲ್ಲಿ 125 ಕ್ಷೇತ್ರಗಳಿಗೆ ಟಿಕೆಟ್ ಅಂತಿಮಗೊಳಿಸಲಾಗಿದೆ.
ಮಾರ್ಚ್ 22ರಂದು ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ಸೇರಲಿದ್ದು ಉಳಿದ 99 ಕ್ಷೇತ್ರಗಳ ಬಗ್ಗೆ ಚರ್ಚೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.
ಇತ್ತೀಚೆಗಷ್ಟೇ ನಿಧನರಾದ ಧ್ರುವನಾರಾಯಣ್ ಪುತ್ರ ದರ್ಶನ್ ಅವರಿಗೆ ನಂಜನಗೂಡು ಕ್ಷೇತ್ರದಿಂದ ಟಿಕೆಟ್ ಅಂತಿಮವಾಗಿದೆ.
ಹೆಚ್ ನಾಗೇಶ್ ಮತ್ತು ಶರತ್ ಬಚ್ಚೇಗೌಡ ಅವರಿಗೆ ಕಾಂಗ್ರೆಸ್ ಟಿಕೆಟ್ ಖಚಿತವಾಗಿದೆ.
ಬಸವನಗುಡಿಯಿಂದ ಎಂಎಲ್ಸಿ ಯು ಬಿ ವೆಂಕಟೇಶ್ ಅವರಿಗೆ ಟಿಕೆಟ್ ಖಾತ್ರಿಯಾಗಿದೆ.
ಸಚಿವ ಸೋಮಣ್ಣ ಅವರು ಒಂದು ವೇಳೆ ಕಾಂಗ್ರೆಸ್ಗೆ ಬರುವುದಾದದರೆ ತಮಗೂ ತಮ್ಮ ಪುತ್ರ ಅರುಣ್ ಸೋಮಣ್ಣಗೂ ಟಿಕೆಟ್ ಕೇಳಿರುವ ಕಾರಣ ಆ ಬಗ್ಗೆ ನಿರ್ಧಾರವನ್ನು ತೆಗೆದುಕೊಂಡಿಲ್ಲ.
ADVERTISEMENT