ಹಿಮಾಚಲಪ್ರದೇಶದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯನ್ನು ಈಡೇರಿಸಿದೆ. ಹಿಮಾಚಲಪ್ರದೇಶದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಮತ್ತೆ ಜಾರಿಗೊಳಿಸಲಾಗಿದೆ.
ಗೆದ್ದು ಅಧಿಕಾರಕ್ಕೆ ಬಂದರೆ ಸರ್ಕಾರದ ಮೊದಲ ಸಂಪುಟ ಸಭೆಯಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ ಅಥವಾ ಎನ್ಪಿಎಸ್ನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ತೀರ್ಮಾನ ಕೈಗೊಳ್ಳುವುದಾಗಿ ಕಾಂಗ್ರೆಸ್ ಚುನಾವಣಾ ಪ್ರಚಾರದ ವೇಳೆ ವಾಗ್ದಾನ ಮಾಡಿತ್ತು.
ಅದರಂತೆ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಕು ಅವರ ಸರ್ಕಾರ ತನ್ನ ಮೊದಲ ಸಂಪುಟ ಸಭೆಯಲ್ಲೇ ಹಳೆ ಪಿಂಚಣಿ ಯೋಜನೆ ಜಾರಿಗೆ ತೀರ್ಮಾನ ಕೈಗೊಂಡಿದೆ.
ಈ ನಿರ್ಧಾರದಿಂದ 1.30 ಲಕ್ಷ ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ.
ಹಳೆ ಪಿಂಚಣಿ ಯೋಜನೆ ಜಾರಿಯಿಂದಾಗುವ ಅರ್ಥಿಕ ಹೊರೆಯನ್ನು ಸರಿದೂಗಿಸಲು ಡೀಸೆಲ್ ಮೇಲೆ ಪ್ರತಿ ಲೀಟರ್ಗೆ 3 ರೂಪಾಯಿ ವ್ಯಾಟ್ ವಿಧಿಸುವ ನಿರ್ಧಾರ ಕೈಗೊಂಡಿದೆ.
ಹಳೆ ಪಿಂಚಣಿ ಮರು ಜಾರಿಗೆ ರಾಜ್ಯ ಸರ್ಕಾರಕ್ಕೆ 800ರಿಂದ 900 ಕೋಟಿ ರೂಪಾಯಿ ಅಗತ್ಯವಾಗಿದೆ.
ಹಳೆ ಪಿಂಚಣಿ ಯೋಜನೆ ಮರು ಜಾರಿ ಬಗ್ಗೆ ಪ್ರತಿಕ್ರಿಯಿಸಿರುವ ಹಿಮಾಚಲಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸುಖು
ಸರ್ಕಾರಿ ನೌಕರರ ಸಾಮಾಜಿಕ ಭದ್ರತೆ ಮತ್ತು ಆತ್ಮಗೌರವ ಕಾಪಾಡುವುದು ಮುಖ್ಯ
ಎಂದಿದ್ದಾರೆ.
ADVERTISEMENT
ADVERTISEMENT