ADVERTISEMENT
ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಿಗೆ ಜನಮನ್ನಣೆ ವ್ಯಕ್ತವಾಗಿದೆ ಎಂದು ಸಮೀಕ್ಷೆಯಲ್ಲಿ ಅಂದಾಜಿಸಲಾಗಿದೆ.
ಕನ್ನಡದ ಈದಿನ.ಕಾಮ್ ನಡೆಸಿರುವ ಸಮೀಕ್ಷೆಯಲ್ಲಿ ಶೇಕಡಾ 73ರಷ್ಟು ಗ್ಯಾರಂಟಿ ಯೋಜನೆಗಳು ಜನಪರ ಆಗಿವೆ ಎಂದು ಜನಾಭಿಪ್ರಾಯ ಸಿಕ್ಕಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಈದಿನ ಅತ್ಯಂತ ನಿಖರ ಚುನಾವಣಾಪೂರ್ವ ಸಮೀಕ್ಷೆಯನ್ನು ಮಾಡಿತ್ತು. ಕರ್ನಾಟಕದಲ್ಲಿ ಕಾಂಗ್ರೆಸ್ಗೆ 135 ಸೀಟುಗಳು ಬರುವ ಬಗ್ಗೆ ಅಂದಾಜು ಮಾಡಿತ್ತು.
ಗ್ಯಾರಂಟಿ ಯೋಜನೆಗಳ ಸಂಬಂಧ ನಡೆಸಲಾದ ಸಮೀಕ್ಷೆಯಲ್ಲಿ ಶೇಕಡಾ 73ರಷ್ಟು ಮಂದಿ ಗ್ಯಾರಂಟಿ ಯೋಜನೆಗಳು ಜನರ ಹಕ್ಕು, ಗ್ಯಾರಂಟಿ ಯೋಜನೆಗಳ ಮೂಲಕ ಜನರ ಹಣವನ್ನು ಮತ್ತೆ ಜನರಿಗೆ ನೀಡಲಾಗುತ್ತಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ಇಂತಹ ಗ್ಯಾರಂಟಿ ಯೋಜನೆಗಳ ಅಗತ್ಯತೆ ಇದೆ ಎಂದು ಶೇಕಡಾ 68ರಷ್ಟು ಮಂದಿ ಜನಾಭಿಪ್ರಾಯ ತಿಳಿಸಿದ್ದಾರೆ.
ಬಡವರು, ಸಣ್ಣ ರೈತರು ಮತ್ತು ವ್ಯಾಪಾರಸ್ಥರಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.
ಈ ಗ್ಯಾರಂಟಿ ಯೋಜನೆಗಳನ್ನು ಸಮಪರ್ಕವಾಗಿ ಜಾರಿಗೊಳಿಸಲಾಗಿದೆ ಎಂದು ಶೇಕಡಾ 43ರಷ್ಟು ಮಂದಿ, ಪರಿಣಾಮಕಾರಿಯಾಗಿ ಜಾರಿಯಾಗಿಲ್ಲ ಎಂದು ಶೇಕಡಾ 43ರಷ್ಟು ಮಂದಿ ಮತ್ತು ಗ್ಯಾರಂಟಿ ಯೋಜನೆಗಳ ನಿಯಮ ಬದಲಿಸಲಾಗಿದೆ ಎಂದು ಶೇಕಡಾ 15ರಷ್ಟು ಮಂದಿ ಅಭಿಪ್ರಾಯಪಟ್ಟಿದ್ದಾರೆ.
ಅನ್ನಭಾಗ್ಯಕ್ಕೆ ಅಕ್ಕಿ ಕೊಡದಿರುವುದು ಕೇಂದ್ರ ಸರ್ಕಾರದ ತಪ್ಪು ಎಂದು ಬಹುತೇಕ ಎಲ್ಲರೂ ಅಭಿಪ್ರಾಯಪಟ್ಟಿದ್ದಾರೆ.
32 ವಿಧಾನಸಭಾ ಕ್ಷೇತ್ರಗಳ 152 ಬೂತ್ಗಳಲ್ಲಿ ಈದಿನ ಸಮೀಕ್ಷೆಗಾಗಿ ಮಾದರಿಗಳನ್ನು ಸಂಗ್ರಹಿಸಿತ್ತು.
ADVERTISEMENT