ADVERTISEMENT
ಬಿಜೆಪಿ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇವತ್ತು ಬೆಂಗಳೂರಿನ ನ್ಯಾಯಾಲಯದಲ್ಲಿ ಹಾಜರಾಗಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ರಾಹುಲ್ ಅವರು ಹಾಜರಾಗಲಿದ್ದಾರೆ. ಇವತ್ತು ಬೆಳಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿ ಅವರನ್ನು ಬರಮಾಡಿಕೊಳ್ಳಲಿದ್ದಾರೆ.
ವಿಶೇಷ ಎಂದರೆ ಲೋಕಸಭಾ ಚುನಾವಣಾ ಫಲಿತಾಂಶ ಬಳಿಕ ರಾಹುಲ್ ಕರ್ನಾಟಕಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ.
2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಶೇಕಡಾ 40ರಷ್ಟು ಕಮಿಷನ್ ಆರೋಪ ಹೊರಿಸಿ ಜಾಹೀರಾತು ನೀಡಿತ್ತು.
ಆ ಜಾಹೀರಾತಿನ ವಿರುದ್ಧ ಬಿಜೆಪಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ವಿಧಾನಪರಿಷತ್ ಸದಸ್ಯ ಕೇಶವ ಪ್ರಸಾದ್ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದರು.
ಈ ಪ್ರಕರಣದಲ್ಲಿ ಈಗಾಗಲೇ ಬೆಂಗಳೂರಿನ ಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಜಾಮೀನು ಮಂಜೂರು ಮಾಡಿದೆ.
ADVERTISEMENT