ADVERTISEMENT
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಮೂರು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕೆಂಬ ಸ್ವಪಕ್ಷೀಯರ ಆಗ್ರಹಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.
ಮೂರು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ವಿಚಾರ ಹೈಕಮಾಂಡ್ ಮುಂದೆ ಇಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಿ
ಎಂದು ಕಲಬುರಗಿಯಲ್ಲಿ ಖರ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.
ಹೆಚ್ಚುವರಿ ಉಪ ಮುಖ್ಯಮಂತ್ರಿ ಪ್ರಸ್ತಾಪ ನಮ್ಮ ಮುಂದೆ ಇಲ್ಲ. ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ. ಚುನಾವಣೆ ಸಂದರ್ಭದಲ್ಲಿ ಇಂತಹ ವಿಚಾರ ಚರ್ಚೆಗೆ ಬರಬಾರದು. ಸರ್ಕಾರ ನಡೆಸುವ ಕಡೆ, ಸಮಸ್ಯೆ ಕಡೆ ಗಮನ ಕೊಡಬೇಕು. ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ಕಡೆಗೆ ಗಮನ ಕೊಡಬೇಕು. ನಮ್ಮ ಗುರಿ ಮುಟ್ಟುವವರೆಗೆ ಇಂತಹದ್ದಕ್ಕೆ ಅವಕಾಶ ಕೊಡಬಾರದು
ಎಂದು ಖರ್ಗೆ ಅವರು ಕರ್ನಾಟಕ ಕಾಂಗ್ರೆಸ್ ನಾಯಕರಿಗೆ ಬುದ್ಧಿ ಹೇಳಿದ್ದಾರೆ.
ಲೋಕಸಭೆ ಚುನಾವಣೆಗೆ ಕರ್ನಾಟಕದ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ಸಭೆ ನಡೆಯಲಿದೆ. ಇಂಡಿಯಾ ಒಕ್ಕೂಟ ಒಟ್ಟಾಗಿ ಹೋಗುವ ನಿರ್ಣಯ ಕೈಗೊಂಡಿದ್ದೇವೆ. ಬುಧವಾರ ದೆಹಲಿಯಲ್ಲಿ ಅನೇಕ ಘಟಕಗಳ ಸಭೆ ಕೂಡ ಕರೆದಿದ್ದೇವೆ. ಈಗಾಗಲೇ ಎಲ್ಲಾ ಕ್ಷೇತ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಿದ್ದೇವೆ
ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರು ಹೇಳಿದರು.
ADVERTISEMENT