Congress Presidential Election : ರಾಜ್ಯದ ಮಲ್ಲಿಕಾರ್ಜುನ್ ಖರ್ಗೆ ನಾಮಪತ್ರ ಸಲ್ಲಿಕೆ – ಘಟಾನುಘಟಿಗಳ ಸಾಥ್

Mallikarjun Kharge

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಇಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೀಯ ಚುನಾವಣೆಗೆ (Congress Presidential Election) ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ದೆಹಲಿಯ ಪಕ್ಷದ ಪ್ರಧಾನ ಕಚೇರಿಗೆ ತಮ್ಮ ಬೆಂಬಲಿಗ ನಾಯಕರೊಂದಿಗೆ ಆಗಮಿಸಿದ ಮಲ್ಲಿಕಾರ್ಜುನ್ ಖರ್ಗೆಯವರು ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಅವರಿಗೆ ತಮ್ಮ ಪ್ರಮಾಣ ಪತ್ರ ಸಲ್ಲಿಸಿದರು.

ಮಲ್ಲಿಕಾರ್ಜುನ ಖರ್ಗೆಯವರಿಗೆ (Mallikarjun Kharge) ಸೂಚಕರಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಎ.ಕೆ.ಆ್ಯಂಟನಿ, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಅಂಬಿಕಾ ಸೋನಿ, ಮುಖುಲ್ ವಾಸ್ನಿಕ್, ಅಭಿಷೇಕ್ ಸಿಂಗ್ವಿ, ಅಜಯ್ ಮಖೇನ್, ಭೂಪೇಂದರ್ ಎಸ್ ಹುಡಾ, ದಿಗ್ವಿಜಯ್ ಸಿಂಗ್ ಮತ್ತು ತಾರಿಖ್ ಅನ್ವರಿ ಸೇರಿದಂತೆ ಕಾಂಗ್ರೆಸ್​​ನ ಪ್ರಮುಖ ಘಟಾನುಘಟಿ ನಾಯಕರು ಸಹಿ ಮಾಡಿದ್ದಾರೆ.

ನಾಮಪತ್ರ ಸಲ್ಲಿಕೆಯಾದ ನಂತರ ಮಾತನಾಡಿದ ಮಲ್ಲಿಕಾರ್ಜುನ್ ಖರ್ಗೆಯವರು, ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಹಾಗೂ ಕಾರ್ಯಕರ್ತರು ನಾನು ಸ್ಪರ್ಧಿಸುವಂತೆ ಪ್ರೋತ್ಸಾಹಿಸಿದರು. ಅವರೆಲ್ಲರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ. ಚುನಾವಣಾ ಅಕ್ಟೋಬರ್ 17 ರಂದು ನಡೆಯಲಿದೆ. ನಾನೇ ಗೆಲ್ಲುತ್ತೇನೆ ಎಂಬ ಭರವಸೆ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : Congress President Election : ಕಾಂಗ್ರೆಸ್​​ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆಗೆ ವೇಳಾಪಟ್ಟಿ ಪ್ರಕಟ

ಮಲ್ಲಿಕಾರ್ಜುನ್ ಖರ್ಗೆಯವರು ಗಾಂಧಿ ಪರಿವಾರದ ಬೆಂಬಲಿತ ಅಭ್ಯರ್ಥಿಯಾಗಿದ್ದಾರೆ. ಅಲ್ಲದೇ, ಇವರೇ ಗೆಲ್ಲುವ ಅಭ್ಯರ್ಥಿ ಎಂದೇ ಪರಿಗಣಿಸಲಾಗುತ್ತಿದೆ.

ಈ ಮೊದಲು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅಧ್ಯಕ್ಷೀಯ ಸ್ಥಾನದ ಚುನಾವಣೆತಗೆ ಸ್ಪರ್ಧಿಸುತ್ತಾರೆ ಎನ್ನಲಾಗಿತ್ತು. ಆದರೆ, ರಾಜಸ್ಥಾನದಲ್ಲಿ ನಡೆದ ರಾಜಕೀಯ ಕ್ಷಿಪ್ರ ಬದಲಾವಣೆಗಳಿಂದ ಅವರು ಹಿಂದೆ ಸರಿಯುವಂತಾಯಿತು. ಕೊನೆ ಗಳಿಗೆಯಲ್ಲಿ ಮಲ್ಲಿಕಾರ್ಜುನ್ ಖರ್ಗೆಯವರನ್ನು ಸಜ್ಜುಗೊಳಿಸಲಾಗಿತ್ತು.

ಜಿ-23 ಬಣದ ತಮಿಳುನಾಡಿನ ಕಾಂಗ್ರೆಸ್​ನ ಹಿರಿಯ ನಾಯಕ ಶಶಿ ತರೂರ್ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ದಕ್ಷಿಣ ಭಾರತೀಯರಾದ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹಾಗೂ ಶಶಿ ತರೂರ್ ನಡುವೆ ನೇರ ಹಣಾಹಣಿ ನಡೆಯಲಿದೆ.

ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆಗೆ ಸಕಲ ಸಿದ್ಧತೆ ಮಾಡಲಾಗಿದ್ದು, ಪಕ್ಷದ ಮುಖಂಡರು ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಸಬಹುದು. ಅಕ್ಟೋಬರ್ 17 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 19 ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ : ಕಾಂಗ್ರೆಸ್​ ಅಧ್ಯಕ್ಷೀಯ ಚುನಾವಣೆ : ಶಶಿ ತರೂರ್ ನಾಮಪತ್ರ ಸಲ್ಲಿಕೆ