ಸಂಸತ್ ಭವನದಲ್ಲಿ ಭಾರೀ ಭದ್ರತಾಲೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತೀವ್ರ ಟೀಕೆಗೆ ಗುರಿಯಾಗಿದೆ. ಈ ವಿಷಯವನ್ನು ಸದ್ಬಳಕೆ ಮಾಡಿಕೊಂಡಿರುವ ಪ್ರತಿಪಕ್ಷ ಕಾಂಗ್ರೆಸ್ ಇದೀಗ ಪ್ರತಾಪ್ ಸಿಂಹರವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, –
ಹಿಂದೆ 2001ರಲ್ಲಿ ಇದೇ ದಿನ ಸಂಸತ್ ಭವನದ ಮೇಲೆ ಉಗ್ರರ ದಾಳಿಯಾಗಿತ್ತು, ಆಗಲೂ ಬಿಜೆಪಿ ಆಡಳಿತವಿತ್ತು. ಈಗ ಸಂಸತ್ ಭವನದ ಒಳಗೆಯೇ ಭದ್ರತಾ ಲೋಪವಾಗಿದೆ. ಪುಲ್ವಾಮದಲ್ಲಿ ಯೋಧರನ್ನು ರಕ್ಷಿಸಲಾಗಲಿಲ್ಲ, ಸಂಸತ್ತಿನಲ್ಲಿ ಸಂಸದರನ್ನೂ ರಕ್ಷಿಸಲು ವಿಫಲವಾಗಿದೆ. ಈ ದಾಳಿಯಲ್ಲಿ ಪ್ರತಾಪ್ ಸಿಂಹರ ಹೆಸರು ಮೇಲ್ನೋಟದಲ್ಲೇ ಕಂಡುಬಂದಿದೆ.
ಸ್ಪೀಕರ್ ಓಂ ಬಿರ್ಲಾ ಅವರು ಪ್ರತಾಪ್ ಸಿಂಹ ಅವರನ್ನು ಈ ಕೂಡಲೇ ಸಂಸತ್ ಸದಸ್ಯ ಸ್ಥಾನದಿಂದ ವಜಾಗೊಳಿಸಿ ತನಿಖೆ ನಡೆಸಬೇಕು.
ಅಂತ ಕಾಂಗ್ರೆಸ್ ಒತ್ತಾಯಿಸಿದೆ. ಇನ್ನು ದೇಶಾದ್ಯಂತ ಸಂಸತ್ ಭದ್ರತಾಲೋಪಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗ್ತಿದೆ.