BREAKING: ಕರ್ನಾಟಕ ಚುನಾವಣೆ: ಕಾಂಗ್ರೆಸ್​ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಣೆಗೆ ದಿನಾಂಕ ನಿಗದಿ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಲು ದಿನಾಂಕ ನಿಗದಿಯಾಗಿದೆ.

ಮೂಲಗಳ ಪ್ರಕಾರ ಇದೇ ಮಾರ್ಚ್​ 17ರಂದು ಅಂದರೆ ಶುಕ್ರವಾರ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಲಿದೆ.

ಮೊದಲ ಹಂತದಲ್ಲಿ 120ರಿಂದ 150 ವಿಧಾನಸಭಾ ಕ್ಷೇತ್ರಗಳಿಗೆ ಟಿಕೆಟ್​ ಘೋಷಣೆ ಮಾಡುವ ನಿರೀಕ್ಷೆ ಇದೆ.

ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್​ 20ರಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ತಮ್ಮ ಮೊದಲ ಚುನಾವಣಾ ಪ್ರಚಾರಕ್ಕಾಗಿ ಬೆಳಗಾವಿಗೆ ಭೇಟಿ ನೀಡುತ್ತಿದ್ದಾರೆ.

ಅದಕ್ಕೂ ಮೊದಲೇ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಲಿದೆ.

ರಾಹುಲ್​ ಗಾಂಧಿ ಭೇಟಿ ಹಿನ್ನೆಲೆಯಲ್ಲಿ ಮಾರ್ಚ್​ 16ರಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್​ ಅವರು ಕಿತ್ತೂರು ಕರ್ನಾಟಕ ಭಾಗದ ಪಕ್ಷದ ಶಾಸಕರು, ಎಂಎಲ್​ಸಿಗಳು, ಪಕ್ಷದ ಜಿಲ್ಲಾಧ್ಯಕ್ಷರು, ಜಿಲ್ಲಾ ಉಸ್ತುವಾರಿಗಳು ಮತ್ತು ಪದಾಧಿಕಾರಿಗಳ ಸಭೆ ಕರೆದಿದ್ದಾರೆ.

LEAVE A REPLY

Please enter your comment!
Please enter your name here