ಸಚಿವರಿಗೆ ಇನ್ನೂ ಖಾತೆ ಹಂಚಿಕೆಯಾಗಿಲ್ಲ, ಅದು ನಕಲಿ – ಕಾಂಗ್ರೆಸ್​ನಿಂದ ಸ್ಪಷ್ಟನೆ

ಸಿಎಂ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಇನ್ನೂ ಸಚಿವರಿಗೆ ಖಾತೆ ಹಂಚಿಕೆ ಆಗಿಲ್ಲ ಎಂದು ಕಾಂಗ್ರೆಸ್​ ಅಧಿಕೃತ ಸ್ಪಷ್ಟನೆ ನೀಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ. ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ, ಯಾರೂ ಸಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ. ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.

ಎಂದು ಕಾಂಗ್ರೆಸ್​ ಟ್ವೀಟಿಸಿದೆ.