ದಕ್ಷಿಣ ಕನ್ನಡ ಕಾಂಗ್ರೆಸ್​ ಹಿಂದುಳಿದ ವರ್ಗಗಳ ಜಿಲ್ಲಾ ಉಪಾಧ್ಯಕ್ಷರಾಗಿ ಪದ್ಮನಾಭ ಸಾಮಂತ್​ ನೇಮಕ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಪದ್ಮನಾಭ ಸಾಮಂತ್ ವಾಮದಪದವು ಅವರನ್ನು ನೇಮಿಸಲಾಗಿದೆ.

ಮಾಜಿ ಸಚಿವರಾದ ಬಿ ರಮಾನಾಥ ರೈ ಅವರ ಶಿಫಾರಸಿನ ಮೇರೆಗೆ ನೇಮಕ ಮಾಡಲಾಗಿದೆ. 

ಆಯ್ಕೆ ಮಾಡಿದ ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾದ ಶ್ರೀ ಹರೀಶ್ ಕುಮಾರ್, ಮಾಜಿ ಸಚಿವರಾದ ಶ್ರೀ ಬಿ ರಮಾನಾಥ ರೈ , ದ. ಕ ಜಿಲ್ಲಾ ಕಾಂಗ್ರೆಸ್ ನ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷರಾದ ಶ್ರೀ ವಿಶ್ವಾಸ್ ಕುಮಾರ್ ದಾಸ್ ಅವರಿಗೆ ವಾಮದಪದವು ಚೆನ್ನೈ ತೋಡಿ ಕಾಂಗ್ರೆಸ್​ ವಲಯದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಮತ್ತು ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದ್ದಾರೆ.