ಶಾಲೆಗಳಲ್ಲಿ ಸಂವಿಧಾನದ ಪೀಠಿಕೆ ಓದುವುದು ಕಡ್ಡಾಯ

ಸಾಂಧರ್ಬಿಕ ಚಿತ್ರ

ಶಾಲೆಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಪ್ರತಿ ದಿನ ಓದುವುದು ಕಡ್ಡಾಯವಾಗಿದೆ. ಈ ಸಂಬಂಧ ಇವತ್ತು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯವಾಗಿದೆ.

ಪ್ರತಿಯೊಂದು ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನದ ಪೀಠಿಕೆಯ ಭಾವಚಿತ್ರವನ್ನು ಅಳವಡಿಸುವುದು ಕಡ್ಡಾಯವಾಗಿದೆ.

ಈ ಹಿಂದೆ ಬಿಜೆಪಿ ಸರ್ಕಾರ ತಂದಿದ್ದ ಮತಾಂತರ ನಿಷೇಧ ಕಾಯ್ದೆಯನ್ನೂ ರದ್ದುಪಡಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ತೀರ್ಮಾನಿಸಿದೆ.

ಮತಾಂತರ ನಿಷೇಧ ಕಾಯ್ದೆ ಎಂದೇ ಕರೆಯಲಾಗುವ ಕರ್ನಾಟಕ ಧಾರ್ಮಿಕ ಹಕ್ಕುಗಳ ರಕ್ಷಣಾ ಕಾಯ್ದೆಯನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್​ ಕೆ ಪಾಟೀಲ್​ ಅವರು ಹೇಳಿದ್ದಾರೆ.