ಮಂಡ್ಯ: ನೆರೆ ರಾಜ್ಯ ಕೇರಳದಲ್ಲಿ ಕೊರೊನಾ ಅಬ್ಬರಿಸುತ್ತಿದ್ದು, ಇದೀಗ ಕರ್ನಾಟಕದಲ್ಲಿಯೂ ಮೊದಲ ಕೋವಿಡ್ ಪ್ರಕರಣ ದಾಖಲಾಗಿದೆ.
ಕೆಲ ದಿನಗಳಿಂದ ಕೊರೊನಾ ಸೋಂಕು ಪ್ರಕರಣಗಳ ಪ್ರಮಾಣ ಹೆಚ್ಚಾಗುತ್ತಿದ್ದು, ಇದೀಗ ರಾಜ್ಯಕ್ಕೂ ಕಾಲಿಟ್ಟಿದೆ.
ಹೌದು ಮಂಡ್ಯ ಜಿಲ್ಲೆಯ ಮದ್ದೂರಿನ ವ್ಯಕ್ತಿಯೊಬ್ಬರಿಗೆ ಕೋವಿಡ್- 19 ಇರುವುದು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
ಕೇರಳದಲ್ಲಿ ಕೊರೊನಾ ವೈರಸ್ ನ ಜೆಎನ್1 ರೂಪಾಂತರಿ ತಳಿ ಹರಡುತ್ತಿದೆ. ಯಾವುದೇ ಪ್ರಯಾಣದ ಇತಿಹಾಸವಿಲ್ಲದ ಮಂಡ್ಯದ ಮದ್ದೂರಿನ ವ್ಯಕ್ತಿ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಪರೀಕ್ಷೆ ನಡೆಸಿದಾಗ ಕೋವಿಡ್ ಇರುವುದು ದೃಢಪಟ್ಟಿದೆ.
ಸೋಂಕಿತ ವ್ಯಕ್ತಿಯಲ್ಲಿ ಯಾವುದೇ ರೋಗ ಲಕ್ಷಣಗಳು ಕಂಡು ಬಂದಿಲ್ಲ. ವ್ಯಕ್ತಿಯ ಸಂಪರ್ಕದಲ್ಲಿರುವ ನಾಲ್ವರಿಗೆ ಆರ್ ಟಿಪಿಸಿಆರ್ ಪರೀಕ್ಷೆ ನಡೆಸಲಾಗಿದ್ದು, ಅವರಲ್ಲಿ ನೆಗೆಟಿವ್ ವರದಿ ಬಂದಿದೆ.
ವ್ಯಕ್ತಿಯನ್ನು ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿದ್ದು, ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ರಾಜ್ಯದಲ್ಲಿ ಕೋವಿಡ್ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.