60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗುವುದು ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
60 ವರ್ಷ ಮೇಲ್ಪಟ್ಟವರಿಗೆ, ಹೃದಯ ಸಂಬಂಧಿ ಕಾಯಿಲೆ ಇರುವವರಿಗೆ, ಕೋವಿಡ್ ಸೋಂಕು ಇರುವವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗುವುದು. ಈ ಸಂಬಂಧ ಶೀಘ್ರವೇ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಸಚಿವರು ಹೇಳಿದರು.
ಕೋವಿಡ್ ಪರೀಕ್ಷೆ ಹೆಚ್ಚಳ ಮಾಡಲಾಗುವುದು. ಉಸಿರಾಟ ತೊಂದರೆ, ಕೋವಿಡ್ ಲಕ್ಷಣ ಇರುವವರಿಗೆ ಪರೀಕ್ಷೆ ಕಡ್ಡಾಯಗೊಳಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಎಲ್ಲರಿಗೂ ಮಾಸ್ಕ್ ಕಡ್ಡಾಯಲ್ಲ:
ಎಲ್ಲರಿಗೂ ಮಾಸ್ಕ್ ಕಡ್ಡಾಯ ಮಾಡುವ ಪರಿಸ್ಥಿತಿ ಬಂದಿಲ್ಲ ಎಂದು ಆರೋಗ್ಯ ಸಚಿವರು ಸ್ಪಷ್ಟಪಡಿಸಿದ್ದಾರೆ.
ಜನರ ಓಡಾಟಕ್ಕೂ ನಿರ್ಬಂಧ ಇಲ್ಲ:
ಜನರ ಓಡಾಟಕ್ಕೆ ನಿರ್ಬಂಧ ಹೇರುವ ಸ್ಥಿತಿ ಬಂದಿಲ್ಲ ಎಂದೂ ಸಚಿವರು ಸ್ಪಷ್ಟಪಡಿಸಿದ್ದಾರೆ.
ADVERTISEMENT
ADVERTISEMENT