ನಾನು ಸತ್ತ ಮೇಲೆ ಇಲ್ಲೇ ಅಂತ್ಯಕ್ರಿಯೆ ಮಾಡಬೇಕು – ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

CM Basavaraj Bommai
CM Basavaraj Bommai

ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆಗೆ ನಾಲ್ಕೇ ತಿಂಗಳು ಬಾಕಿ ಇರುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಭಾವನಾತ್ಮಕ ತಂತ್ರ ಪ್ರಯೋಗಿಸಿದ್ದಾರೆ.

ನಾನು ಸತ್ತ ಮೇಲೆ ನನ್ನ ಅಂತ್ಯಕ್ರಿಯೆ ಇದೇ ಕ್ಷೇತ್ರದಲ್ಲಿ ಮಾಡಬೇಕು. ನಾನು ಸತ್ತ ಮೇಲೆ ಇದೇ ಮಣ್ಣಿನಲ್ಲಿ ಹೂಳಬೇಕು

ಎಂದು ತಮ್ಮ ಸ್ವಕ್ಷೇತ್ರ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದ ಬಾಡ ಗ್ರಾಮದಲ್ಲಿ ಹೇಳಿದ್ದಾರೆ. ತಾವು ಮೊದಲ ಬಾರಿಗೆ ಶಿಗ್ಗಾಂವಿ ಕ್ಷೇತ್ರದಲ್ಲಿ ಚುನಾವಣೆಗೆ ನಿಂತಾಗ ಆಡಿದ್ದ ಮಾತನ್ನು ಬೊಮ್ಮಾಯಿ ಸ್ಮರಿಸಿಕೊಂಡಿದ್ದಾರೆ.

ಯಾವ ಜನ್ಮದ ಋಣವೋ ಗೊತ್ತಿಲ್ಲ. ನಾನು ಬಂದಾಗ ಪ್ರೀತಿ ವಿಶ್ವಾಸ ತೋರಿಸಿದ್ದೀರಿ. ನಾನು‌ ಸತ್ತ ಮೇಲೆ ನನ್ನ ಅಂತ್ಯಕ್ರಿಯೆ ಇದೇ ಕ್ಷೇತ್ರದಲ್ಲಿ ಮಾಡಬೇಕು ಎಂದು ಬಾಡ ಗ್ರಾಮದಲ್ಲಿ ಆಯೋಜಿಸಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಕಂದಾಯ ಸಚಿವ ಆರ್.ಅಶೋಕ ಗ್ರಾಮದ ವಾಸ್ತವ್ಯ ಮಾಡಿರುವ ಗ್ರಾಮಗಳಿಗೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡುವುದಾಗಿಯೂ ಘೋಷಿಸಿದ್ದಾರೆ.

LEAVE A REPLY

Please enter your comment!
Please enter your name here